ಯುವಕರು ದೇಶಾಭಿಮಾನದಿಂದ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕು : ಶಶಿಕಲಾ ಜೊಲ್ಲೆ

ದೇಶದ ಅಭಿವೃದ್ಧಿಗಾಗಿ ಯುವಕರು ಪ್ರಾಮಾಣಿಕ ಮನೋಭಾವ ಹಾಗೂ ದೇಶಾಭಿಮಾನದಿಂದ ಪ್ರಗತಿಯೆಡೆಗೆ ಹೆಜ್ಜೆ ಹಾಕಬೇಕು ಎಂದು ರಾಜ್ಯ ಮುಜರಾಯಿ, ವಕ್ಫ್ ಹಾಗೂ ಹಜ್ ಸಚಿವರಾದ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ಕರೆ ನೀಡಿದರು.
ಸೋಮವಾರದಂದು ಜಿಲ್ಲಾಡಳಿತದಿಂದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 76ನೇ ಸ್ವಾತಂತ್ರö್ಯ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ರಾಷ್ಟç ಧ್ವಜಾರೋಹಣವನ್ನು ನೆರವೇರಿಸಿ ಅವರು ಮಾತನಾಡಿದರು.
ಸ್ವಾತಂತ್ರö್ಯ ದಿನಾಚರಣೆ ಒಂದು ದಿನಕ್ಕೆ ಸೀಮಿತವಾಗದೆ, ನಮಗೆ ಸ್ವಾತಂತ್ರö್ಯ ದೊರಕಿಸಿಕೊಡಲು ಜೀವ ಬಲಿದಾನ ಮಾಡಿದ ಮಹನೀಯರಂತೆ ಯುವಕರು ದೇಶಾಭಿಮಾನ ಬೆಳೆಸಿಕೊಳ್ಳಬೇಕು. ಇಂದಿನ ಮಕ್ಕಳೇ ಭವಿಷ್ಯದ ಪ್ರಜೆಗಳಾಗಿರುವುದರಿಂದ ಮಕ್ಕಳಲ್ಲಿ ಈಗಿಂದಲೇ ರಾಷ್ಟçದ ಬಗ್ಗೆ ಅಭಿಮಾನ ಮೂಡಿಸುವ ಕಾರ್ಯವನ್ನು ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ಸಮಾಜದಲ್ಲಿ ಅಳವಡಿಸಬೇಕು. ಪ್ರತಿ ಕಾರ್ಯದಲ್ಲೂ ನಿಷ್ಠೆ ಹಾಗೂ ಪ್ರಾಮಾಣಿಕತೆ ಇರಬೇಕು. ಮುಂದಿನ ದಿನಗಳಲ್ಲಿ ಎಂಥದ್ದೇ ಸಮಸ್ಯೆ, ಸಂಕಷ್ಟಗಳು ಎದುರಾದರೂ ಧೈರ್ಯವಾಗಿ ಎದುರಿಸುವ ಗಟ್ಟಿತನವನ್ನು ಬೆಳೆಸಿಕೊಳ್ಳಬೇಕು. ಯುವಕರು ರಾಷ್ಟç ಪ್ರೇಮದಿಂದ ಅಭಿವೃದ್ಧಿಯೆಡೆಗೆ ಸಾಗಬೇಕು. ಸಮೃದ್ಧ ಭಾರತದ ಗುರಿ ನಮ್ಮದಾಗಬೇಕು ಎಂದು ಅವರು ಹೇಳಿದರು.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಇಲಾಖೆಗಳ ಮುಖಾಂತರ ಹಲವಾರು ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿಗೆ ತಂದಿದೆ. ಆರ್ಥಿಕ ಚಟುವಟಿಕೆಗಳಿಗೆ ಪುನಶ್ಚೇತನ ನೀಡಿವೆ. ಜಿಲ್ಲೆಯ ಅಂಜನಾದ್ರಿ ಬೆಟ್ಟವನ್ನು ಅಂತರಾಷ್ಟಿçÃಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ರಾಜ್ಯ ಸರ್ಕಾರ ರೂ.120 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಅದರಂತೆ ಮುಜರಾಯಿ ಇಲಾಖೆಯಿಂದ ಪ್ರತಿ ವರ್ಷ ಕಾಶಿ ಯಾತ್ರೆಗೆ ತೆರಳುವ ಕರ್ನಾಟಕದ 30 ಸಾವಿರ ಯಾತ್ರಾರ್ಥಿಗಳಿಗೆ ರೂ.5000/-ಗಳ ಸಬ್ಸಿಡಿ ನೀಡಲಾಗುತ್ತಿದ್ದು, 7 ದಿನಗಳ ಪ್ರವಾಸದಲ್ಲಿ ಕಾಶಿ, ಅಯೋಧ್ಯ ಮತ್ತು ಪ್ರಯಾಗರಾಜ್‌ಗೆ ಯಾತ್ರೆಯನ್ನು ಕೈಗೊಳ್ಳಲು ಅನುಕೂಲವಾಗುವಂತೆ ವಿಶೇಷವಾದ ಭಾರತ್ ಗೌರವ್ ರೈಲನ್ನು ಈ ತಿಂಗಳ ಕೊನೆಗೆ ಬಿಡುಗಡೆ ಮಾಡಲಾಗುವುದು ಎಂದು ಸಚಿವರು ಹೇಳಿದರು.
ಭಾರತಕ್ಕೆ ಸ್ವಾತಂತ್ರö್ಯ ದೊರೆತು 75 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ವರ್ಷ ಆಗಸ್ಟ್ 13 ರಿಂದ 15 ರವರೆಗೆ ಪ್ರತಿ ಮನೆಗಳ ಮೇಲೆ ರಾಷ್ಟç ಧ್ವಜಾರೋಹಣ ಮಾಡುವ ಮೂಲಕ ಸ್ವಾತಂತ್ರö್ಯದ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಣೆ ಮಾಡಲಾಗುತ್ತಿದೆ. ಈ ಮೂಲಕ ಸ್ವಾತಂತ್ರö್ಯದ ಸಂಭ್ರಮದಲ್ಲಿ ಸರ್ವರೂ ಭಾಗಿಯಾಗಿರುವುದು ನಮ್ಮ ದೇಶದ ಹೆಮ್ಮೆ. ಇಂದು ಕಿತ್ತೂರು ಸಂಸ್ಥಾನದ ರಾಣಿ ಚೆನ್ನಮ್ಮ ಅವರ ಬಲಗೈ ಭಂಟನಾಗಿದ್ದ ಸಂಗೊಳ್ಳಿ ರಾಯಣ್ಣನ ಜನ್ಮ ದಿನಾಚರಣೆಯೂ ಆಗಿರುವುದರಿಂದ ನಮ್ಮ ದೇಶಾಭಿಮಾನ ಹಾಗೂ ಸ್ವಾತಂತ್ರö್ಯದ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಅದರಂತೆ ಮುಂಡರಗಿ ಭೀಮರಾಯರು, ಹಮ್ಮಿಗೆ ಕೆಂಚನಗೌಡರು ಸೇರಿದಂತೆ ಸ್ವಾತಂತ್ರö್ಯ ಹೋರಾಟದಲ್ಲಿ ಜಿಲ್ಲೆಯ ಹೋರಾಟಗಾರರು ತೋರಿಸಿದ ದಿಟ್ಟತನ ಸ್ಮರಣೀಯವಾದದ್ದು ಎಂದು ಅವರು ಹೇಳಿದರು.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ವತಿಯಿಂದ ವಿವಿಧ ಇಲಾಖೆಗಳ ಮೂಲಕ ಜಿಲ್ಲೆಯ ಅಭಿವೃದ್ಧಿಗಾಗಿ ವಿವಿಧ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ ಕೊಪ್ಪಳ, ಕುಷ್ಟಗಿ, ಗಂಗಾವತಿ ಹಾಗೂ ಯಲಬುರ್ಗಾ ತಾಲ್ಲೂಕಿನ 148 ಗ್ರಾಮಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯಡಿ ನೀರು ಪೂರೈಕೆ ಮಾಡಲಾಗುತ್ತಿದೆ.  ಡಿ.ಬಿ.ಒ.ಟಿ ಆಧಾರಿತ ಕುಡಿಯುವ ನೀರು ಸರಬರಾಜು ಯೋಜನೆಯಡಿ ಕುಷ್ಟಗಿ ತಾಲ್ಲೂಕಿನ 123 ಹಾಗೂ ಯಲಬುರ್ಗಾ ತಾಲ್ಲೂಕಿನ 91 ಗ್ರಾಮಗಳು ಸೇರಿದಂತೆ ಒಟ್ಟು 214 ಗ್ರಾಮಗಳಿಗೆ ನಿರಂತರವಾಗಿ ನೀರು ಸರಬರಾಜು ಮಾಡಲಾಗುತ್ತಿದೆ. ಅದರಂತೆ ಕಳೆದ ಶೈಕ್ಷಣಿಕ ವರ್ಷದಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಜಿಲ್ಲೆಯು ಶೇ.87.72 ರಷ್ಟು ಸಾಧನೆ ಮಾಡಿದೆ. ಜಿಲ್ಲೆಯ ಒಟ್ಟು 84 ಶಾಲೆಗಳು ಶೇ.100 ರಷ್ಟು ಫಲಿತಾಂಶವನ್ನು ಸಾಧಿಸಿವೆ ಎಂದು ಅವರು ಹೇಳಿದರು.
ಸ್ವಾತಂತ್ರö್ಯದ ಅಮೃತ ಮಹೋತ್ಸವದ ಈ ಸುದಿನದಂದು ನಾವೆಲ್ಲರೂ ಸಮೃದ್ಧ ಭಾರತದ ಗುರಿಯನ್ನು ಹೊಂದೋಣ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಸರ್ಕಾರದೊಂದಿಗೆ ಕೈಜೋಡಿಸಿ, ದೇಶದ ಅಭಿವೃದ್ಧಿಗೆ ಕಾರಣವಾಗೋಣ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕರಾದ ಕೆ. ರಾಘವೇಂದ್ರ ಹಿಟ್ನಾಳ್ ವಹಿಸಿದ್ದರು.  ಮುಖ್ಯ ಅತಿಥಿಗಳಾಗಿ ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಶಾಸಕರಾದ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಆಗಮಿಸಿದ್ದರು.
ಜಿಲ್ಲಾಧಿಕಾರಿ ಎಂ.ಸುAದರೇಶ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣಪ್ಪ ಕಲಶೆಟ್ಟಿ, ತಹಶೀಲ್ದಾರ ವಿಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಶಾಲಾ ಮಕ್ಕಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಪಥಸಂಚಲನ ಮತ್ತು ಸಾಧಕರಿಗೆ ಸನ್ಮಾನ ;
76ನೇ ಸ್ವಾತಂತ್ರೊö್ಯÃತ್ಸವದ ದಿನಾಚರಣೆ ಅಂಗವಾಗಿ ಪೊಲೀಸ್, ಎನ್.ಸಿ.ಸಿ., ಸೇವಾದಳ, ಭಾರತ ಸ್ಕೌಟ್ಸ್ & ಗೈಡ್ಸ್, ಅರಣ್ಯ ಇಲಾಖೆ ಹಾಗೂ ಗೃಹ ರಕ್ಷಕ ದಳ ಸೇರಿದಂತೆ ಒಟ್ಟು 16 ತಂಡಗಳಿAದ ಪಥಸಂಚಲನ, ಗೌರವ ರಕ್ಷೆ ಸ್ವೀಕಾರ ಕಾರ್ಯಕ್ರಮ ನಡೆಯಿತು. ಜ್ಞಾನಬಂಧು ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ನಿವೇದಿತಾ ಪ್ರೌಢಶಾಲೆ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.
ಪಥಸಂಚಲನದಲ್ಲಿ ಭಾಗವಹಿಸಿದ್ದ ಕಾಳಿದಾಸ ಪ್ರೌಢಶಾಲೆಯ ಸೇವಾದಳ ತಂಡಕ್ಕೆ ಪ್ರಥಮ ಬಹುಮಾನ, ಎಸ್.ಎಫ್.ಎಸ್ ಶಾಲೆಯ ಗೈಡ್ಸ್ ತಂಡಕ್ಕೆ ದ್ವಿತೀಯ ಬಹುಮಾನ ಹಾಗೂ ಸ್ವಾಮಿ ವಿವೇಕಾನಂದ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ತೃತೀಯ ಬಹುಮಾನ ನೀಡಲಾಯಿತು. ಸ್ವಾತಂತ್ರö್ಯ ಹೋರಾಟಗಾರರಾದ ಸುಮಂತರಾವ್ ಪಟವಾರಿ, ಹನುಮಂತಗೌಡ ಪಿ.ಪಾಟೀಲ, ಕೃಷ್ಣಾಚಾರ ಹಾಗೂ ಗಿರಿಜಮ್ಮ ಗುರುಲಿಂಗಯ್ಯಸ್ವಾಮಿ ಅವರಿಗೆ ಜಿಲ್ಲಾಡಳಿತದ ವತಿಯಿಂದ ಸಚಿವರು ಹಾಗೂ ಗಣ್ಯರು ಸನ್ಮಾನಿಸಿದರು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಜಿಲ್ಲೆಯ ನಾಗರತ್ನ ರೇವಣಸಿದ್ದಪ್ಪ ಅಂಗಡಿ, ಗುರುಲಿಂಗಮ್ಮ ರಾಮಣ್ಣ ಗದ್ದಿ, ಮಹೇಶ್ವರಿ ಶರಣಪ್ಪ ಟೆಂಗುAಟಿ, ನೀಲಮ್ಮ ರಮೇಶ ಶೆಟ್ಟರ್, ಶಿಲ್ಪ ಹನುಮಪ್ಪ ವಡಗೇರಿ, ಸ್ವಾತಿ ಮಾಣಿಕ್ ಬೊಮ್ಮಾನಿ ಅವರಿಗೆ ಪ್ರೋತ್ಸಾಹದಾಯಕವಾಗಿ ಲ್ಯಾಪ್‌ಟಾಪ್ ವಿತರಣೆ ಮಾಡಲಾಯಿತು.
ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಅತ್ಯುತ್ತಮ ಸೇವೆ ನೀಡಿದ ಕಾರಟಗಿ ಸಮುದಾಯ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಶಕುಂತಲಾ ಪಾಟೀಲ್, ಗಂಗಾವತಿಯ ಶ್ರೀ ಮಲ್ಲಿಕಾರ್ಜುನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ನಿರ್ದೇಶಕ ಡಾ.ನಾಗರಾಜ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಬೆಂಗಳೂರು ಇವರಿಂದ ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ್ ಆರೋಗ್ಯ ಕರ್ನಾಟಕ  ಯೋಜನೆಯಡಿ ಪ್ರಮಾಣ ಪತ್ರಗಳನ್ನು ನೀಡಿ ಸನ್ಮಾನಿಸಿ,  ಗೌರವಿಸಲಾಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ವಹಿಸಿದ್ದರು.  ಈ ಸಂದರ್ಭದಲ್ಲಿ ಸಂಸದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಬೊಮ್ಮಕ್ಕನವರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್.ಪಾಟೀಲ್, ಜಿಲ್ಲಾಧಿಕಾರಿ ಎಂ.ಸುAದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣ್ಣೆಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರ ವೀಠ್ಠಲ್ ಚೌಗಲಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

Please follow and like us: