ಕುಕನೂರು ತಹಶೀಲ್ದಾರರ ಕಛೇರಿಯಲ್ಲಿ ಮಂಗಳವಾರ (ಸೆ.೧೩) ನಡೆದ ಬಾಲಕಾರ್ಮಿಕ ಸಮೀಕ್ಷೆಯಲ್ಲಿ ಪತ್ತೆಯಾದ ಮಕ್ಕಳನ್ನು ಬಾಲಮಂದಿರಕ್ಕೆ ಹಾಗೂ ಸಮೀಪದ ಶಾಲೆಗೆ ಸೇರಿಸುವುದರ ಮೂಲಕ ಮುಖ್ಯ ವಾಹಿನಿಗೆ ತರುವ ಮತ್ತು ಬಾಲಕಾರ್ಮಿಕ ಪದ್ಧತಿ ನಿರ್ಮೂಲನಾ ಕ್ರಿಯಾ ಯೋಜನೆಯ ಅನುಷ್ಠಾನ ಪ್ರಗತಿ ಕುರಿತಂತೆ ರಚಿಸಿದ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಸಭೆಯು ಅಧ್ಯಕ್ಷತೆ ವಹಿಸಿ ಅವರು ಹೇಳಿದರು.
ಇಲಾಖೆಯ ಕೆಲಸದ ಜೊತೆಗೆ ಬಾಲಕಾರ್ಮಿಕರನ್ನು ಗುರುತಿಸುವುದು ಎಲ್ಲಾ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಬಾಲಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆಯಲ್ಲಿ ವಿವಿಧ ೧೩ ಇಲಾಖೆಗಳ ಎಲ್ಲಾ ಗ್ರಾಮ ಮಟ್ಟದಿಂದ ಜಿಲ್ಲಾ ಮಟ್ಟದವರೆಗೆ ಅಧಿಕಾರಿಗಳನ್ನು ಕಲಂ ೧೭ರ ಅಧಿಕಾರಿಗಳೆಂದು ನೇಮಕ ಮಾಡಿದೆ. ೧೪ ವರ್ಷದೊಳಗಿನ ಯಾವುದೇ ಮಕ್ಕಳು ಯಾವುದೇ ವೃತ್ತಿಯಲ್ಲಿ ಕೆಲಸ ನಿರ್ವಹಿಸುವುದು ಮತ್ತು ೧೪ ರಿಂದ ೧೮ ವರ್ಷದೊಳಗಿನ ಮಕ್ಕಳು ಅಪಾಯಕಾರಿ ವೃತ್ತಿಯಲ್ಲಿ ಮತ್ತು ಪ್ರಕ್ರಿಯೆಗಳಲ್ಲಿ ಕೆಲಸ ಮಾಡುವುದನ್ನು ನಿಷೇಧಿಸಲಾಗಿದೆ. ಆ ನಿಟ್ಟಿನಲ್ಲಿ ಎಲ್ಲಾ ಅಧಿಕಾರಿಗಳು ನಿರಂತರ ಬಾಲಕಾರ್ಮಿಕರ ತಪಾಸಣೆ ನಡೆಸಿ ತಾಲೂಕು ಆಡಳಿತಕ್ಕೆ ನಿಯಮಿತವಾಗಿ ವರದಿ ಸಲ್ಲಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆಯಿಂದ ಇತ್ತೀಚಿಗೆ ಬಾಲಕಾರ್ಮಿಕ ಸಮೀಕ್ಷೆ ನಡೆದಿದ್ದು, ಸಮೀಕ್ಷೆಯಲ್ಲಿ ಕಂಡು ಬಂದ ಬಾಲಕಾರ್ಮಿಕರನ್ನು ಹಾಗೂ ಕಿಶೋರ ಕಾರ್ಮಿಕರನ್ನು ಪತ್ತೆ ಮಾಡಲು ಹಾಗೂ ಪುನರ್ವಸತಿಗೊಳಿಸಲು ಜಿಲ್ಲಾಧಿಕಾರಿಗಳು, ನಗರ ಹಾಗೂ ಗ್ರಾಮೀಣ ಮಟ್ಟದಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳನ್ನೊಳಗೊಂಡ ತಂಡವನ್ನು ರಚನೆ ಮಾಡಿದ್ದು, ತಂಡದ ಎಲ್ಲಾ ಅಧಿಕಾರಿಗಳು ತಮ್ಮ ತಮ್ಮ ಕಾರ್ಯವ್ಯಾಪ್ತಿಯಲ್ಲಿ ಕಂಡು ಬಂದ ಮಕ್ಕಳ ವಿವರಗಳನ್ನು ಪಡೆದುಕೊಂಡು ಪರಿಶೀಲಿಸಿ ಸಮೀಪದ ಶಾಲೆಗಳಿಗೆ ದಾಖಲಿಸುವುದರ ಮೂಲಕ ಮುಖ್ಯ ವಾಹಿನಿಗೆ ದಾಖಲಿಸುವುದು ಹಾಗೂ ಪುನರ್ವಸತಿ ಅವಶ್ಯಕತೆ ಇರುವ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿ ಪುನರ್ವಸತಿ ಕಲ್ಪಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ರಾಮನ್ನ ವಿ.ದೊಡ್ಡಮನಿ, ಉಪ ತಹಶೀಲ್ದಾರ ವೀರಣ್ಣ ತಳುಗೇರಿ, ಕಾರ್ಮಿಕ ನಿರೀಕ್ಷಕ ಶಿವಶಂಕರ್ ತಳವಾರ, ಬಾಲಕಾರ್ಮಿಕ ಯೋಜನಾ ನಿರ್ದೇಶಕ ಬಸವರಾಜ ಹಿರೇಗೌಡ್ರ ಸೇರಿದಂತೆ ಶಿಕ್ಷಣ ಇಲಾಖೆ, ಕಂದಾಯ, ಅಧಿಕಾರಿಗಳು, ಪಟ್ಟಣ ಪಂಚಾಯತ ಆರೋಗ್ಯ ನಿರೀಕ್ಷಕ ಸಿಬ್ಬಂದಿ, ಮಕ್ಕಳ ಸಹಾಯವಾಣಿ-೧೦೯೮ ಸಂಯೋಜಕರು, ಸಿಬ್ಬಂದಿಗಳು, ಅಂಗನವಾಡಿ ಮೇಲ್ವೀಚಾರಕಿಯರು ಹಾಗೂ ವಿವಿಧ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ವಿವಿಧ ವಾಣಿಜ್ಯ ಸಂಸ್ಥೆಗಳ ಪರಿಶೀಲನೆ :
ಸಭೆಯ ನಂತರ ಕುಕನೂರು ತಾಲೂಕಿನ ವಿವಿಧ ವಾಣಿಜ್ಯ ಸಂಸ್ಥೆಗಳನ್ನು ಪರಿಶೀಲಿಸಲಾಯಿತು. ಈ ವೇಳೆ ಕುಕನೂರಿನ ಗುದ್ನೆಪ್ಪನ ಮಠ ರಸ್ತೆಯ ಅಂಬಿಕಾ ಸ್ವೀಟ್ಸ್, ಬಸ್ಸ್ಟಾ?ಯಂಡ್ ಎದುರಿನ ಗುರು ಹೋಟೆಲ್, ಎ.ಎಮ್.ಕೆ ಸೈಕಲ್ ಶಾಪ್‌ಗಳಲ್ಲಿ ಪರಿಶೀಲಿದಾದಗ ಗುದ್ನೆಪ್ಪನ ಮಠ ರಸ್ತೆಯ ಎ.ಎಮ್.ಕೆ ಸೈಕಲ್ ಶಾಪ್‌ನಲ್ಲಿ ೧೬ ವರ್ಷದ ೦೩ ಕಿಶೋರ ಕಾರ್ಮಿಕ ಮಕ್ಕಳು ಪತ್ತೆಯಾಗಿದ್ದು, ಈ ಎಲ್ಲಾ ಮಕ್ಕಳನ್ನು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲು ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಯು ಸೂಚಿಸಿ, ಸಂಬಂಧಿಸಿದ ಎಲ್ಲಾ ಮಾಲೀಕರಿಗೆ ನೋಟಿಸ್ ಜಾರಿ ಮಾಡಿದೆ.