ಕನ್ನಡ ನಾಡು-ನುಡಿ ಸೇವೆಗೆ ಸರ್ಕಾರ ಸದಾ ಬದ್ಧ: ಆನಂದಸಿಂಗ್

 ರಾಜ್ಯ ಸರ್ಕಾರವು ಕನ್ನಡ ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದು ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಹೇಳಿದರು.
67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೊಪ್ಪಳ ಜಿಲ್ಲಾಡಳಿತದಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ನವೆಂಬರ್ 1ರಂದು ನಡೆದ ಕನ್ನಡ ರಾಜ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಮ್ಮ ತನು ಕನ್ನಡವಾಗಲಿ, ಮನ ಕನ್ನಡವಾಗಲಿ, ನುಡಿ ಕನ್ನಡವಾಗಲಿ, ಎಂದೆAದೂ ಕನ್ನಡ ಉಸಿರಾಗಲಿ, ಕನ್ನಡ ಸದಾ ಹಸಿರಾಗಿರಲಿ ಎಂದು ಎಲ್ಲರೂ ಸಂಕಲ್ಪ ಹೊಂದೋಣ ಎಂದರು.
ಬ್ರಿಟಿಷರ ಅಧಿಕಾರದ ಅವಧಿಯಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟದ ಪ್ರತಿಫಲವಾಗಿ 1956ರ ನವೆಂಬರ್ 01 ರಂದು ನಮ್ಮ ರಾಜ್ಯ ಉದಯವಾಯಿತು. ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ ಅನೇಕ ಮಹನೀಯರಲ್ಲಿ ಈ ಸಮಯದಲ್ಲಿ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ತಿಳಿಸಿದರು.
ರಾಷ್ಟçಕವಿ ಕುವೆಂಪು ಅವರು ಹೇಳುವಂತೆ ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ವಿವಿಧೆÀತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿAದ ಶ್ರೀಮಂತವಾಗಿದೆ. ಆದಿಕವಿ ವಾಲ್ಮೀಕಿಯಿಂದ ಆರಂಭವಾಗಿ ಪಂಪ, ರನ್ನ ಮೊದಲಾದ ಕವಿಗಳು ತಮ್ಮ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ ಎಂದರು.
ರಾಜ್ಯೋತ್ಸವ ನಿಮಿತ್ತ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ರಾಜ್ಯ ಸರ್ಕಾರವು ಕೋಟಿ ಕಂಠ ಗಾಯನ ಕಾರ್ಯಕ್ರಮ ಹಮ್ಮಿಕೊಂಡು ಯಶಸ್ವಿಗೊಳಿಸಿ ಕನ್ನಡಿಗರಲ್ಲಿ ಕನ್ನಡಾಭಿಮಾನ ಹೆಚ್ಚುವಂತೆ ಮಾಡಿದೆ ಎಂದು ತಿಳಿಸಿದ ಸಚಿವರು, 2022ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಕೊಪ್ಪಳ ಜಿಲ್ಲೆಯ ಮೋರನಾಳ ಗ್ರಾಮದ ಬಯಲಾಟ ಕಲಾವಿದರಾದ ಶ್ರೀ ಶಂಕರಪ್ಪ ಹೊರಪೇಟಿ ಮತ್ತು ಕಿನ್ನಾಳ ಕಲೆಯಲ್ಲಿ ಹೆಸರು ಮಾಡಿರುವ ಕಿನ್ನಾಳ ಗ್ರಾಮದ ಶ್ರೀ ಸಣ್ಣರಂಗಪ್ಪ ಚಿತ್ರಗಾರ ಅವರಿಗೆ ತಾವು ಮನದುಂಬಿ ಅಭಿನಂದನೆಗಳನ್ನು ಸಲ್ಲಿಸುವುದಾಗಿ ತಿಳಿಸಿದರು.
ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆ ವಿಶೇಷ ಸಾಧನೆ ತೋರಿದೆ. 59.52 ಲಕ್ಷ ಮಾನವ ದಿನಗಳನ್ನು ಸೃಜನೆ ಮಾಡಿದ್ದು, 245.06 ಕೋಟಿ ರೂ.ಗಳ ಅನುದಾನ ಬಳಕೆ ಮಾಡಲಾಗಿದೆ. ಜಲ ಜೀವನ್ ಮಿಷನ್ ಯೋಜನೆಯಡಿ 1,23,485 ಜನವಸತಿಗಳಿಗೆ ನಳ ಸಂಪರ್ಕ ನೀಡಲು 278.15 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾರ್ಯಾದೇಶ ಕೂಡ ನೀಡಿದ್ದು, ವಿವಿಧ ಹಂತದಲ್ಲಿ ಪ್ರಗತಿಯಲ್ಲಿದೆ. ಕುಷ್ಟಗಿ, ಕುಕನೂರ ಹಾಗೂ ಯಲಬುರ್ಗಾ ತಾಲೂಕಿನ 331 ಗ್ರಾಮಗಳಿಗೆ ಕುಡಿಯುವ ನೀರು ಸರಬರಾಜು ಯೋಜನೆಯ ಪ್ರಗತಿಯು ಶೇ.92ರಷ್ಟಾಗಿದೆ ಎಂದರು.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಪವಿತ್ರ ಸ್ಥಳವಾದ ಅಂಜನಾದ್ರಿ ಬೆಟ್ಟ ಪ್ರದೇಶವನ್ನು ಅಂತಾರಾಷ್ಟ್ಟೀಯ ಮಟ್ಟದಲ್ಲಿ ಅಭಿವೃದ್ಧಿ ಪಡಿಸಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇದಕ್ಕಾಗಿ 120 ಕೋಟಿ ರೂ. ಅನುದಾನವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಸಮಗ್ರ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಗೊಂಡು ಅನುಷ್ಠಾನಕ್ಕೆ ಮುಂದಾಗಿದ್ದೇವೆ ಎಂದು ತಿಳಿಸಿದರು.
2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಒದಗಿಸಲಾಗಿರುವ ಅನುದಾನದಲ್ಲಿ ಬೃಹತ್ ಅಭಿವೃದ್ದಿ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ 40 ಕೋಟಿ ರೂ., ಅಂಜನಾದ್ರಿ ಬೆಟ್ಟದ ಅಭಿವೃದ್ಧಿಗಾಗಿ 40 ಕೋಟಿ ರೂ., ಕುಕನೂರು ಮತ್ತು ಯಲಬುರ್ಗಾ ಬೈಪಾಸ್ ರಸ್ತೆ ನಿರ್ಮಾಣಕ್ಕಾಗಿ 48.52 ಕೋಟಿ ರೂ.ಹಾಗೂ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಗಳಿಗೆ ಮೂಲಭೂತ ಸೌಕರ್ಯ ಮತ್ತು ವಿವಿಧ ಕಾಮಗಾರಿಗಳಿಗೆ 108.53 ಕೋಟಿ ರೂ.ಸೇರಿ ಜಿಲ್ಲೆಗೆ 380.60 ಕೋಟಿ ರೂ.ಗಳ ಅನುದಾನ ನಿಗದಿಪಡಿಸಲಾಗಿದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಕೊಠಡಿಗಳ ನಿರ್ಮಾಣಕ್ಕಾಗಿ ಅನುದಾನ ಮಂಜೂರಾಗಿದ್ದು, ಅನುಷ್ಠಾನಗೊಳಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಬೃಹತ್ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಯ ಯಲಬುರ್ಗಾ ಮತ್ತು ಕನಕಗಿರಿ ತಾಲ್ಲೂಕಿಗೆ ಪೌಷ್ಟಿಕ ಆಹಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪ್ರತಿ ಘಟಕಕ್ಕೆ 1 ಕೋಟಿ ರೂ. ಅನುದಾನದಂತೆ ಒಟ್ಟು 2 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಅನುಮೋದನೆ ನೀಡಿದ್ದಾರೆ. 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ದಿ ಮಂಡಳಿಯ ಬೃಹತ್ ಯೋಜನೆಯಲ್ಲಿ 137 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲು ಅನುಮೋದನೆ ನೀಡಲಾಗಿದೆ ಎಂದರು.
ವಸತಿ ಯೋಜನೆಯ ಅನುಷ್ಠಾನದಲ್ಲಿ ಕೊಪ್ಪಳ ಜಿಲ್ಲೆಯು ರಾಜ್ಯದ ಗಮನ ಸೆಳೆದಿದ್ದು ಶೇ.55.47ರಷ್ಟು ಪ್ರಗತಿ ಸಾಧಿಸಿ ರಾಜ್ಯಕ್ಕೆ ಕೊಪ್ಪಳ ಜಿಲ್ಲೆಯು 6ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿದ್ದರಿಂದ ಬಿತ್ತನೆ ಕಾರ್ಯ ಪ್ರಗತಿಯಲ್ಲಿದ್ದು, ಈ ವರ್ಷ ಹಿಂಗಾರು ಹಂಗಾಮು ಜಿಲ್ಲೆಗೆ ಆಶಾದಾಯಕವಾಗಿದೆ. ಜಿಲ್ಲೆಯಲ್ಲಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸಲು, ಕೃಷಿ ಯಂತ್ರೋಪಕರಣಗಳನ್ನು ಪ್ರೋತ್ಸಾಹಿಸಲು ಇಂಧನ ವೆಚ್ಚದ ಭಾರ ಕಡಿಮೆ ಮಾಡಲು ಪ್ರತಿ ಎಕರೆಗೆ 250 ರಂತೆ ಗರಿಷ್ಠ 5 ಎಕರೆಗೆ ಡಿ.ಬಿ.ಟಿ ಮೂಲಕ ಡಿಸೇಲ್‌ಗೆ ಸಹಾಯಧನ ನೀಡಲು ರೈತಶಕ್ತಿ ಎಂಬ ಹೊಸ ಯೋಜನೆ ಜಾರಿ ಮಾಡಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಡಿ ಕೊಪ್ಪಳ ಜಿಲ್ಲೆಯಲ್ಲಿ 2022-23ನೇ ಸಾಲಿನಲ್ಲಿ ಮುಂಗಾರು ಹಂಗಾಮಿನಲ್ಲಿ 80,567 ರೈತರು ಬೆಳೆ ವಿಮೆಗೆ ಹೆಸರು ನೋಂದಾಯಿಸಿದ್ದಾರೆ. 2021-22ನೇ ಮುಂಗಾರು ಹಂಗಾಮಿನಿAದ ಇಲ್ಲಿಯವರೆಗೂ 33,351 ರೈತರಿಗೆ 29.23 ಕೋಟಿ ರೂ. ಅದೇ ರೀತಿ ಹಿಂಗಾರು ಹಂಗಾಮಿನಲ್ಲಿ ಇಲ್ಲಿಯವರೆಗೆ 11,684 ರೈತರಿಗೆ 12.80 ಕೋಟಿ ಬೆಳೆ ವಿಮೆ ಪರಿಹಾರ ಜಮಾ ಆಗಿದೆ ಎಂದು ಹೇಳಿದರು.
ಕೊಪ್ಪಳ ತಾಲ್ಲೂಕು ಲಿಂಗದಹಳ್ಳಿ ಗ್ರಾಮದಲ್ಲಿ ಅಲ್ಪಸಂಖ್ಯಾತರ ನವೋದಯ ಮಾದರಿ ವಸತಿ ಶಾಲೆಯ ಸ್ವಂತ ಕಟ್ಟಡ ಕಾಮಗಾರಿಯನ್ನು 25 ಕೋಟಿ ರೂ.ವೆಚ್ಚದಲ್ಲಿ ಕೈಗೊಳ್ಳಲಾಗಿದೆ. ಕುಕನೂರ ಮತ್ತು ಗಂಗಾವತಿಯಲ್ಲಿ ಎರಡು ಸರ್ಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜುಗಳಿಗೆ 20 ಕೋಟಿ ರೂ.ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣ ಕಾಮಗಾರಿ ಕೈಗೊಳ್ಳಲಾಗಿದೆ ಎಂದರು.
ಮುಖ್ಯಮAತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆಯಡಿ 2022-23ನೇ ಸಾಲಿಗೆ ಕೊಪ್ಪಳ ಜಿಲ್ಲೆಗೆ 1,470 ನಿರುದ್ಯೋಗ ಅಭ್ಯರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರದಿಂದ ಆದೇಶವಾಗಿದ್ದು, ತರಬೇತಿಯು ಚಾಲ್ತಿಯಲ್ಲಿದೆ. ಕೊಪ್ಪಳ ಜಿಲ್ಲೆಯ ಭಾನಾಪುರ ಗ್ರಾಮದಲ್ಲಿ ಸ್ಥಾಪನೆಯಾದ ಎಕಸ್ ಟಾಯ್ ಕ್ಲಸ್ಟರ್ ನಲ್ಲಿ ಬೇಕಾಗುವಂತಹ ಮಾನವ ಸಂಪನ್ಮೂಲಗಳನ್ನು ಒದಗಿಸಲು ಜಿ.ಟಿ.ಟಿ.ಸಿ ಮತ್ತು ಎಕ್ವೀಸ್ ಸಂಸ್ಥೆಗಳಿAದ 1,230 ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡಲು ಸರ್ಕಾರ ಅನುಮೋದನೆ ನೀಡಿದೆ. ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದ ಚಿತ್ರಗಾರ ಸಮುದಾಯದ 50 ಕುಶಲಕರ್ಮಿಗಳಿಗೆ ಮರದ ಆಟಿಕೆ ತಯಾರಿಕೆಯ ತರಬೇತಿಯನ್ನು (ಕಿನ್ನಾಳ ಗೊಂಬೆ) ನೀಡಲು ಸರ್ಕಾರದಿಂದ ಅನುಮೋದಿಸಲಾಗಿದೆ ಎಂದು ತಿಳಿಸಿದರು.
ಕೊಪ್ಪಳ ವಿಧಾನಸಭಾ ಕ್ಷೇತ್ರದ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸದರಾದ ಕರಡಿ ಸಂಗಣ್ಣ, ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ, ಜಿಲ್ಲಾಧಿಕಾರಿಗಳಾದ ಎಂ.ಸುAದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಉಪವಿಭಾಗಾಧಿಕಾರಿ ಬಸವಣ್ಣಪ್ಪ ಕಲಶೆಟ್ಟಿ, ಕೊಪ್ಪಳ ತಹಶೀಲ್ದಾರ್ ಅಮರೇಶ ಬಿರಾದಾರ್ ಸೇರಿದಂತೆ ಇತರರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಜಿಲ್ಲೆಯ ವಿವಿಧ ಕನ್ನಡಪರ ಸಂಘಟನೆಗಳ ಪದಾಧಿಕಾರಿಗಳು, ಮತ್ತು ಇನ್ನೀತರ ಸಂಘಟನೆಗಳ ಪ್ರಮುಖರು, ನಾಗರಿಕರು, ಗಣ್ಯರು, ಅಧಿಕಾರಿಗಳು, ಸಾರ್ವಜನಿಕರು ಮತ್ತು ವಿವಿಧ ಶಾಲೆಗಳ ಮಕ್ಕಳು ಭಾಗಿಯಾಗಿದ್ದರು.
ಆಕರ್ಷಕ ಪಥಸಂಚಲನ, ಕರಾಟೆ ಪ್ರದರ್ಶನ: 67ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ಕೊಪ್ಪಳ ಡಿಎಆರ್ ಪೊಲೀಸ್, ನಾಗರಿಕ ಪೊಲೀಸ್, ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಮಹಿಳಾ ಪೊಲೀಸ್ ತಂಡಗಳ ಜೊತೆ ಎಸ್.ಜಿ.ಕಾಲೇಜು ಎನ್.ಸಿ.ಸಿ. ಮತ್ತು ಜೂನಿಯರ್ ಕಾಲೇಜ್ ಎನ್.ಸಿ.ಸಿ., ಜಿಲ್ಲಾ ಕ್ರೀಡಾ ವಸತಿ ಶಾಲೆಯ ತಂಡ, ಕಾಳಿದಾಸ ಪ್ರೌಢಶಾಲೆಯ ಸೇವಾದಳ, ಎಸ್.ಜಿ.ಹೌಸ್ಕೂಲ್ ಸ್ಕೌಟ್, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಶಿವಶಾಂತವೀರ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ತಂಡಗಳಿAದ ಆಕರ್ಷಕ ಪಥಸಂಚಲನ ನಡೆಯಿತು.
ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳು ಮತ್ತು ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಸತಿ ಶಾಲೆ ಹಾಗೂ ವಸತಿ ನಿಲಯಗಳ ವಿದ್ಯಾರ್ಥಿನಿಯರು ನಡೆಸಿದ ಓಬವ್ವ ಆತ್ಮ ರಕ್ಷಣೆ ಕಲೆ ಕರಾಟೆ ಪ್ರದರ್ಶನವು ಚಪ್ಪಾಳೆ ಗಿಟ್ಟಿಸಿತು. ಪಥಸಂಚಲನದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡಗಳಿಗೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ಕರಾಟೆ ಪ್ರದರ್ಶಿಸಿದ ತಂಡಗಳಿಗೆ ಸಚಿವರು ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.
Please follow and like us: