ಡಿಸೆಂಬರ್ 03 ರಂದು ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ವಿಕಲಚೇತನರ ಒಕ್ಕೂಟ, ಕೊಪ್ಪಳ ಮತ್ತು ಜಿಲ್ಲೆಯ ವಿವಿಧ ವಿಕಲಚೇತನರ ಸೇವಾ ಸಂಸ್ಥೆಗಳ ಸಹಯೋಗದಲ್ಲಿ “ವಿಶ್ವ ವಿಕಲಚೇತನರ ದಿನಾಚರಣೆ-2022” ಕಾರ್ಯಕ್ರಮವನ್ನು ಡಿಸೆಂಬರ್ 03 ರಂದು ಬೆಳಿಗ್ಗೆ 11 ಗಂಟೆಗೆ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.
ರಾಜ್ಯ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತç ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಆನಂದ್ ಸಿಂಗ್ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಗಣಿ ಮತ್ತು ಭೂ ವಿಜ್ಞಾನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ ಅವರು ಘನ ಉಪಸ್ಥಿತಿ ವಹಿಸುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕರಡಿ ಸಂಗಣ್ಣ, ಶಾಸಕರುಗಳಾದ ಅಮರೇಗೌಡ ಪಾಟೀಲ ಬಯ್ಯಾಪೂರ, ಪರಣ್ಣ ಈಶ್ವರಪ್ಪ ಮುನವಳ್ಳಿ ಹಾಗೂ ಬಸವರಾಜ ದಢೇಸೂಗೂರು, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ್, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಕೊಪ್ಪಳ ನಗರಸಭೆ ಅಧ್ಯಕ್ಷೆ ಶಿವಗಂಗಾ ಶಿವರೆಡ್ಡಿ ಭೂಮಕ್ಕನವರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಾಂತೇಶ ಎಸ್. ಪಾಟೀಲ್ ಉಪಸ್ಥಿತರಿರುವರು.
ವಿಶೇಷ ಆಹ್ವಾನಿತರಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಟಿ.ಕೆ ಅನಿಲ್ ಕುಮಾರ್, ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ್ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಬಿ.ಫೌಜಿಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಅರುಣಾಂಗ್ಷು ಗಿರಿ ಅವರು ಪಾಲ್ಗೊಳ್ಳುವರು. ಅತಿಥಿ ಉಪನ್ಯಾಸಕರಾಗಿ ವಕೀಲರು ಆದ ಕಾಳಮ್ಮ ಈಶ್ವರಪ್ಪ ಪತ್ತಾರ ಅವರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ವಿಕಲಚೇತನರ ಸಂಘದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ವಿಶ್ವ ವಿಕಲಚೇತನರ ದಿನಾಚರಣೆ-2022ರ ಅಂಗವಾಗಿ ಡಿ. 03 ರಂದು ಬೆಳಿಗ್ಗೆ 09 ಗಂಟೆಗೆ ಮೆರವಣಿಗೆಯು ಕೇಂದ್ರಿಯ ಬಸ್ ನಿಲ್ದಾಣದಿಂದ ತಾಲ್ಲೂಕು ಕ್ರೀಡಾಂಗಣದ ವರೆಗೆ ಜರುಗಲಿದೆ.
Please follow and like us: