ಉದ್ಯೋಗಖಾತ್ರಿ : ಹೆಚ್ಚುವರಿ ಪಾವತಿಸಿದ ಹಣ ಹಿಂದಕ್ಕೆ ಪಡೆಯಿರಿ- ಜ್ಯೋತಿ ಬಿಲ್ಗಾರ್

ಕೊಪ್ಪಳ ಡಿ.  : ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ವಿವಿಧ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ ಪಾವತಿಸಿರುವ ಹಣವನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಿದರು.   ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕರ್ನಾಟಕ ಅಭಿವೃದ್ಧಿ ಅಂಶಗಳ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ಉದ್ಯೋಗಖಾತ್ರಿ ಯೋಜನೆಯಡಿ ಜಿಲ್ಲೆಯಲ್ಲಿ ನಡೆಸಿರುವ ವಿವಿಧ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಥರ್ಡ್ ಪಾರ್ಟಿ ಇನ್ಸ್‌ಪೆಕ್ಷನ್ ನಡೆಸಲು ಕ್ರಮ ಕೈಗೊಳ್ಳಲಾಗಿದೆ.  ಥರ್ಡ್ ಪಾರ್ಟಿ ಇನ್ಸ್‌ಪೆಕ್ಷನ್ ವರದಿಯ ಆಧಾರದಂತೆ ಹೆಚ್ಚುವರಿ ಹಣ ಪಾವತಿಸಿರುವುದಕ್ಕೆ ಸಂಬಂಧಿಸಿದಂತೆ, ಅಂತಹ ಅಧಿಕಾರಿಗಳಿಂದ ಹೆಚ್ಚುವರಿ ಮೊತ್ತ ಹಿಂಪಡೆಯಲು ಅಗತ್ಯ ಕ್ರಮ ಜರುಗಿಸುವಂತೆ ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಜ್ಯೋತಿ ಬಿಲ್ಗಾರ್ ಅವರು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಹೆಚ್. ಕಾಕನೂರ ಅವರಿಗೆ…

Read More