”ಇಂದಿರಾ ಗತಿ ಮೋದಿಗೆ” ವಿವಾದ: ಮಟ್ಟು ಹೇಳಿದ್ದೇನು?

ಬೆಂಗಳೂರು, ನ.6: ಮಾಜಿ ಪ್ರಧಾನಿ ಇಂದಿರಾ ಗಾಂಧಿಗೆ ಕೊನೆಗೆ ಆದ ಗತಿಯೇ ಹಾಲಿ ಪ್ರಧಾನಿ ನರೇಂದ್ರ ಮೋದಿಗೂ ಆಗಬೇಕಾ ಎಂದು ಸಿಎಂ ಮಾಧ್ಯಮ ಸಲಹೆಗಾರ ಅಮೀನ್ ಮಟ್ಟು ಟ್ವೀಟ್ ಮಾಡಿದ್ದಾರೆ ಎಂದು ಆರೋಪಿಸಿ ಬಿಜೆಪಿ ಮುಖಂಡರು ಹಾಗೂ ಆರೆಸ್ಸೆಸ್ ಮುಖಂಡರುಗಳು ಟ್ವೀಟ್ ಮೂಲಕವೇ ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಪರಮೇಶ್ವರ್ ಅವರಿಗೆ ಮಟ್ಟು ಅವರನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ. ದಿನೇಶ್ ಅಮೀನ್ ಮಟ್ಟು ಅವರನ್ನು ಬಂಧಿಸದಿದ್ದರೇ ಅವರ ಬಂಧನಕ್ಕೆ ಒತ್ತಾಯಿಸಿ ಬಿಜೆಪಿ ಮುಖಂಡರು ಹೋರಾಟ ನಡೆಸುತ್ತಾರೆ ಎಂದು ಬಿಜೆಪಿ ಮುಖಂಡ ಅರವಿಂದ್ ಲಿಂಬಾವಳಿ ಎಚ್ಚರಿಕೆ ನೀಡಿದ್ದಾರೆ. ಇದರೊಂದಿಗೆ ಆರೆಸ್ಸೆಸ್ ಮುಖಂಡರೂ ಮಟ್ಟು ಅವರನ್ನು ಬಂಧಿಸಬೇಕೆಂದು ಆಗ್ರಹಿಸಿದ್ದಾರೆ. ಈ ಬಗ್ಗೆ ದಿನೇಶ್ ಅಮೀನ್ ಮಟ್ಟು ಅವರ ಪ್ರತಿಕ್ರಿಯೆ ಹೀಗಿದೆ. ”ಎನ್ ಡಿಟಿವಿ ವಿರುದ್ಧ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವುದನ್ನು ವಿರೋಧಿಸಿ ನಾನೊಂದು ಪೋಸ್ಟ್ ಹಾಕಿದ್ದೆ. ಅದರ ಬಗ್ಗೆ ನಡೆದ…

Read More