ಗೌರಿ ಲಂಕೇಶ್ ಹತ್ಯೆ ಪ್ರಕರಣ: ಶಂಕಿತ ಹಂತಕರ ರೇಖಾಚಿತ್ರ ಬಿಡುಗಡೆ

ಬೆಂಗಳೂರು, ಅ.14: ಹಿರಿಯ ಪತ್ರಕರ್ತೆ, ಪ್ರಗತಿಪರ ಚಿಂತಕಿ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಶಂಕಿತ ಇಬ್ಬರು ಆರೋಪಿಗಳ ರೇಖಾಚಿತ್ರವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ.)ಬಿಡುಗಡೆಗೊಳಿಸಿದೆ. ನಗರದ ಪ್ಯಾಲೇಸ್ ರಸ್ತೆಯಲ್ಲಿರುವ ಸಿಐಡಿ ಕಚೇರಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಎಸ್.ಐ.ಟಿ. ಮುಖ್ಯಸ್ಥ ಬಿ.ಕೆ.ಸಿಂಗ್, ತನಿಖಾಧಿಕಾರಿ ಎಂ.ಎನ್.ಅಮನುಚೇತ್ ಅವರು ಗೌರಿ ಹಂತಕರ ಶಂಕಿತರ ರೇಖಾಚಿತ್ರವನ್ನು ಹಾಗೂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಯನ್ನು ಬಿಡುಗಡೆಗೊಳಿಸಿದರು. ತನಿಖಾ ತಂಡವು ಇಲ್ಲಿಯವರೆಗಿನ ತನಿಖೆಯಲ್ಲಿ ಲಭಿಸಿರುವ ಮಾಹಿತಿಯ ಆಧಾರದಲ್ಲಿ ಈ ರೇಖಾಚಿತ್ರವನ್ನು ಬಿಡುಗಡೆಗೊಳಿಸಿದೆ. ರೇಖಾಚಿತ್ರದಲ್ಲಿರುವವರ ಬಗ್ಗೆ ಹಾಗೂ ಈ ಸಂಬಂಧದ ಸಿಸಿಟಿವಿ ದೃಶ್ಯಾವಳಿಯಲ್ಲಿರುವವರ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಮೊ.ಸಂ. 9480800202, ಇಮೇಲ್: sit.glankesh@ksp.gov.in, ವಾಟ್ಸಾಪ್ ಸಂ.: 9480800304, 9480801701 ಅನ್ನು ಸಂಪರ್ಕಿಸಬಹುದು. ಮಾಹಿತಿ ನೀಡುವವರ ವಿವರವನ್ನು ಗುಪ್ತವಾಗಿ ಇಡಲಾಗುವುದು ಎಂದು ಎಸ್.ಐ.ಟಿ. ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದರು. *ವಿಚಾರವಾದಿಗಳ ಹತ್ಯೆಗಳಿಗೆ ಸಾಮತ್ಯೆ ರೇಖಾಚಿತ್ರ ಬಿಡುಗಡೆಗೊಳಿಸಿ ಮಾತನಾಡಿದ ತನಿಖಾಧಿಕಾರಿಗಳು, ಗೌರಿ…

Read More