ಕೋವಿಡ್ ಆಸ್ಪತ್ರೆ ಆಹಾರ ಪೂರೈಕೆ ಕಡ್ಡಾಯ ಪರಿಶೀಲನೆಗೆ ಜಿಲ್ಲಾಧಿಕಾರಿ ಸೂಚನೆ

ಧಾರವಾಡ ; ಕೋವಿಡ್ ಆಸ್ಪತ್ರೆ ಮತ್ತು ಕೇರ್ ಸೆಂಟರ್‍ಗಳಿಗೆ ಆಹಾರ ಪೂರೈಸುತ್ತಿರುವ ಗುತ್ತಿಗೆ ಏಜೆನ್ಸಿಯ ಗುಣಮಟ್ಟ ಪರಿಶೀಲನೆಗೆ ಆಹಾರ ಭದ್ರತಾ ಅಧಿಕಾರಿಗಳು ಪ್ರತಿದಿನ ತಪಾಸಣೆ ನಡೆಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದ್ದಾರೆ. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ಹುಬ್ಬಳ್ಳಿ ಗೋಪನಕೊಪ್ಪದ ಮಮ್ಮಾಸ್ ಲಂಚ್ ಬಾಕ್ಸ್ ಆಹಾರ ತಯಾರಿಕಾ ಘಟಕಕ್ಕೆ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆಯ ಜಂಟಿನಿರ್ದೇಶಕ ಸದಾಶಿವ ಮರ್ಜಿ, ಸಹಾಯಕ ನಿರ್ದೇಶಕರಾದ ಮಂಜುನಾಥ ರೇವಣಕರ, ದೇವದಾಸ್ ಹಾಗೂ ಆಹಾರ ಭದ್ರತಾ ಅಧಿಕಾರಿಗಳಾದ ಶಿವಕುಮಾರ್ ಹಾಗೂ ಬೆಂಗೇರಿ ಅವರನ್ನೊಳಗೊಂಡ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ಕಾರ ನಿಗದಿಪಡಿಸಿರುವ ಆಹಾರ ಮೆನು ಪ್ರಕಾರ ಪ್ರತಿ ವ್ಯಕ್ತಿಗೆ ಪ್ರತಿದಿನಕ್ಕೆ 235/- ರೂ. ದರದಲ್ಲಿ ಆಹಾರ ಪೂರೈಸಬೇಕು. ಉತ್ತಮ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಸೂಚಿಸಿದರು. Please follow and like us:

Read More