ಆಡಳಿತಾಧಿಕಾರಿ ಹೊರಡಿಸಿದ್ದ ಆದೇಶಗಳಿಗೆ ತಡೆ ನೀಡಿದ ವಕ್ಫ್ ಬೋರ್ಡ್

ಬೆಂಗಳೂರು, ಜ.23: ರಾಜ್ಯ ವಕ್ಫ್ ಬೋರ್ಡ್ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವದಲ್ಲಿ ಇಲ್ಲದೇ ಇರುವ ಸಂದರ್ಭದಲ್ಲಿ ಬೋರ್ಡ್‌ನ ಆಡಳಿತಾಧಿಕಾರಿ ಹೊರಡಿಸಿದ್ದ ಎಲ್ಲ ಪ್ರಮುಖ ಆದೇಶಗಳಿಗೆ ತಡೆ ನೀಡಲು ಸರ್ವಸದಸ್ಯರ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ರಾಜ್ಯ ವಕ್ಫ್ ಬೋರ್ಡ್‌ನ ನೂತನ ಅಧ್ಯಕ್ಷ ಡಾ.ಮುಹಮ್ಮದ್ ಯೂಸುಫ್ ತಿಳಿಸಿದ್ದಾರೆ. ಗುರುವಾರ ನಗರದ ಕನ್ನಿಂಗ್‌ಹ್ಯಾಮ್ ರಸ್ತೆಯಲ್ಲಿರುವ ವಕ್ಫ್ ಬೊರ್ಡ್ ಕಚೇರಿಯಲ್ಲಿ ನಡೆದ ಸರ್ವ ಸದಸ್ಯರ ತುರ್ತು ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಸ್ವಾಯತ್ತ ಸಂಸ್ಥೆಯಾಗಿರುವ ವಕ್ಫ್ ಬೋರ್ಡ್ ಪೂರ್ಣ ಪ್ರಮಾಣದಲ್ಲಿ ಅಸ್ತಿತ್ವದಲ್ಲಿ ಇಲ್ಲದೇ ಇರುವಾಗ ಆಡಳಿತಾಧಿಕಾರಿ ನೀತಿ ನಿರೂಪಣೆಯ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಂತಿಲ್ಲ. ಇದು ವಕ್ಫ್ ಕಾಯ್ದೆ, ನಿಯಮಗಳು ಹಾಗೂ ಸಂವಿಧಾನದ ವಿರುದ್ಧವಾಗಿದೆ ಎಂದು ಅವರು ಹೇಳಿದರು. ವಕ್ಫ್ ಬೋರ್ಡ್‌ಗೆ ನೂತನ ಅಧ್ಯಕ್ಷರ ಆಯ್ಕೆಗಾಗಿ ಜ.22ರಂದು ಚುನಾವಣೆ ನಿಗದಿಯಾಗಿತ್ತು. ನೀತಿ ಸಂಹಿತೆ ಜಾರಿಯಲ್ಲಿರುವಾಗ ಜ.21ರಂದು ರಾತ್ರಿ 23 ಜಿಲ್ಲಾ ವಕ್ಫ್ ಸಲಹಾ…

Read More