ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆ

ಒಟ್ಟು 422 ಮಂದಿ ಗುಣಮುಖ- ರವಿವಾರ 54 ಮಂದಿಗೆ ಸೋಂಕು ದೃಢ ಬೆಂಗಳೂರು, ಮೇ.10: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಹರಡುವ ಪ್ರಮಾಣ ತೀವ್ರಗೊಂಡಿದ್ದು, ಶನಿವಾರ ಸಂಜೆ 5ರಿಂದ ಇಂದು ಸಂಜೆ 5 ಗಂಟೆ ವರೆಗಿನ ಅವಧಿಯಲ್ಲಿ ಒಟ್ಟು 54 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢಪಟ್ಟಿವೆ. ಅಲ್ಲದೇ, ಮೇ.7 ರಂದು ಮೃತಪಟ್ಟಿದ್ದ ಬೆಂಗಳೂರು ನಗರದ 56 ವರ್ಷದ ಮಹಿಳೆಗೆ ಸೋಂಕು ದೃಢಪಟ್ಟಿದ್ದು, ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆಗೊಳಿಸಿರುವ ಬುಲೆಟಿನ್ ‌ನಲ್ಲಿ ಈ ಬಗ್ಗೆ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 848ಕ್ಕೆ ಏರಿಕೆಯಾಗಿದೆ. ಈ ಪೈಕಿ ಇಂದು 31 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸೋಂಕಿತರ ಪೈಕಿ ಬೆಳಗಾವಿಯಲ್ಲಿ 22, ಶಿವಮೊಗ್ಗದಲ್ಲಿ 8, ಬಾಗಲಕೋಟೆಯಲ್ಲಿ 8, ಭಟ್ಕಳದಲ್ಲಿ 7, ಬೆಂಗಳೂರು ನಗರ 3, ಕಲಬುರಗಿ…

Read More