ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ,ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು – ಮಾಜಿ ಸಿಎಂ ಸಿದ್ದರಾಮಯ್ಯ

ಬೆಂಗಳೂರು :   ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೇ ಇರಬೇಕು. ಅನರ್ಹಗೊಂಡ ಶಾಸಕರು ಹತ್ತು ವರ್ಷ ಚುನಾವಣೆಗೆ ಸ್ಪರ್ಧಿಸದಂತೆ ಹಾಗೂ ಯಾವುದೇ ರಾಜಕೀಯ ಅಧಿಕಾರ ಅನುಭವಿಸದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ಧಾರೆ. ಪಕ್ಷಾಂತರ ನಿಷೇಧ ಕಾಯಿದೆ ನಿಯಮಗಳ ಮರುಪರಿಶೀಲನೆ ಸಂಬಂಧ ಅಭಿಪ್ರಾಯ ಸಂಗ್ರಹಿಸಲು ವಿಧಾನಸಭೆಯ ಅಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ ಬಗ್ಗೆ ಟ್ವೀಟ್ ನಲ್ಲಿ ಹೇಳಿರುವ ಅವರು ಪ್ರಜಾಪ್ರಭುತ್ವದ ಬೇರುಗಳು ಗಟ್ಟಿಯಾಗಿರಬೇಕಾದರೆ ಪಕ್ಷಾಂತರವೆಂಬ ಪಿಡುಗು ನಿರ್ಮೂಲನೆ ಆಗಬೇಕು. ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಪಕ್ಷಾಂತರ ಮಾಡುವ ಶಾಸಕರನ್ನು ಅನರ್ಹಗೊಳಿಸುವ ಸಭಾಧ್ಯಕ್ಷರ ಅಧಿಕಾರವನ್ನು ಕಸಿದು ಬೇರೆ ಸಂಸ್ಥೆ ಅಥವಾ ವ್ಯಕ್ತಿಗೆ ನೀಡಿದರೆ ನ್ಯಾಯ ಸಿಗುವ ವಿಶ್ವಾಸವಿರುವುದಿಲ್ಲ. ಪಕ್ಷಾಂತರ ಎಂಬುದು ಸಂವಿಧಾನ ಬಾಹಿರವಾದುದ್ದು. ಪಕ್ಷಾಂತರಿಗಳನ್ನು ಅನರ್ಹಗೊಳಿಸುವಂತೆ ಯಾರಾದರೂ ಅರ್ಜಿ ಸಲ್ಲಿಸಿದರೆ ಆ ಅರ್ಜಿಯನ್ನು ಕಾಲಮಿತಿಯೊಳಗೆ…

Read More