ಮಂಗಳೂರು ಗೋಲಿಬಾರ್ ನಲ್ಲಿ ಸತ್ತದ್ದು ಅಮಾಯಕರಲ್ಲ: ಡಿಸಿಎಂ ಕಾರಜೋಳ ವಿವಾದಾತ್ಮಕ ಹೇಳಿಕೆ

ಬೆಳಗಾವಿ, ಡಿ. 22: ಮಹಾರಾಷ್ಟ್ರ ಮುಖ್ಯಮಂತ್ರಿ ಏನೇ ಹೇಳಿದರೂ ಬೆಳಗಾವಿ ಹಾಗೂ ಅದರ ಸುತ್ತಮುತ್ತಲಿನ ಪ್ರದೇಶ ಕನ್ನಡ ನಾಡಾಗಿಯೇ ಉಳಿಯಲಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದ್ದಾರೆ. ರವಿವಾರ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿ ವಿಷಯ ಕುರಿತು ಉದ್ಧವ್ ಠಾಕ್ರೆ ಹೇಳಿಕೆಯನ್ನು ಖಂಡಿಸಿ, ಅವರು ಹೇಳಿದ್ದೆಲ್ಲಾ ಇಲ್ಲಿ ನಡೆಯುವುದಿಲ್ಲ. ಈ ಭೂಮಿ ಮೇಲೆ ಜನರು ಇರುವರೆಗೂ ಬೆಳಗಾವಿ ಹಾಗೂ ಸುತ್ತಮುತ್ತಲಿನ ಪ್ರದೇಶ ಕರ್ನಾಟಕದಲ್ಲಿಯೇ ಇರುತ್ತದೆ ಎಂದು ತಿಳಿಸಿದರು. ಇತ್ತೀಚಿಗೆ ನಡೆದ ಉಪ ಚುನಾವಣೆಯಲ್ಲಿ 12 ಸ್ಥಾನಗಳನ್ನು ನಾವು ಗೆದ್ದಿದ್ದೇವೆ. ನೂತನ ಶಾಸಕರು ಎಲ್ಲರೂ ಪ್ರಮಾಣ ವಚನ ಸ್ವೀಕರಿಸಿದ್ದಾಗಿದೆ. ಕೆಲವೇ ದಿನಗಳಲ್ಲಿ ಸಚಿವ ಸಂಪುಟವೂ ವಿಸ್ತರಣೆಯಾಗಲಿದೆ. ಅದಕ್ಕಾಗಿ ಸ್ವಲ್ಪ ಕಾಯಬೇಕು ಅಷ್ಟೇ ಎಂದು ಅವರು ಹೇಳಿದರು. ದೇಶದಲ್ಲಿ ನಮ್ಮ ಪಕ್ಷ ಸೂಕ್ತ ಆಡಳಿತ ನಡೆಸುತ್ತಿದೆ. ಪಕ್ಷದ ಯಾವುದೇ ಚಟುವಟಿಕೆಗಳು ಹಾಗೂ ತೀರ್ಮಾನ ಕೈಗೊಳ್ಳುವ ವಿಷಯದಲ್ಲಿ…

Read More