ಡಾ. ಬಾಬಾಸಾಹೇಬ ಅಂಬೇಡ್ಕರ್ ಭಾರತ ದೇಶಕ್ಕೆ ಬಹು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ- ನ್ಯಾಯವಾದಿ ಬಾಹುಸಾಹೇಬ ಕಾಂಬಳೆ

ವಿಜಯಪುರ ಆ. ೧೫- ಮನು ಸಂವಿಧಾನವನ್ನು ಮುರಿದು ಎಲ್ಲರಿಗೂ ಶಿಕ್ಷಣ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕ ಸಮಾನತೆಯನ್ನು ನೀಡುವ ಮೂಲಕ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಭಾರತ ದೇಶಕ್ಕೆ ಬಹು ದೊಡ್ಡ ಕೊಡುಗೆಯನ್ನು ನೀಡಿದ್ದಾರೆ ಎಂದು ಬಹುಜನ ಚಳವಳಿಯ ನೇತಾರ ಹಾಗೂ ನ್ಯಾಯವಾದಿ ಬಾಹುಸಾಹೇಬ ಕಾಂಬಳೆ ಹೇಳಿದರು. ನಗರದ ಸಾರಿಪುತ್ರ ಬುದ್ಧವಿಹಾರದಲ್ಲಿ ನಡೆದಿರುವ ವರ್ಷಾವಾಸ ಕಾರ್ಯಕ್ರಮ ಹಾಗೂ ಸ್ವಾತಂತ್ರ್ಯ ದಿನಾಚರಣೆಯ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ `ಭಾರತಕ್ಕೆ ಡಾ. ಅಂಬೇಡ್ಕರ್‌ರ ಕೊಡುಗೆ’ ಕುರಿತು ವಿಶೇಷ ಉಪನ್ಯಾಸ ನೀಡಿದ ಅವರು, ಮನು ಸಂವಿಧಾನವು ಬ್ರಾಹ್ಮಣ ಮಹಿಳೆಯರೂ ಸೇರಿದಂತೆ ಈ ದೇಶದ ಕೆಳವರ್ಗಗಳಿಗೆ ಶಿಕ್ಷಣವನ್ನು ನಿರಾಕರಿಸಿತ್ತು. ಆದರೆ ಸ್ವತಂತ್ರ ಭಾರತದ ಸಂವಿಧಾನದಲ್ಲಿ ಶಿಕ್ಷಣವನ್ನು ಕಡ್ಡಾಯ ಮತ್ತು ಮೂಲಭೂತ ಹಕ್ಕನ್ನಾಗಿ ಪರಿವರ್ತಿಸುವ ಮೂಲಕ ಡಾ. ಅಂಬೇಡ್ಕರ್ ಅವರು ಬಹುಮುಖ್ಯ ಕೊಡುಗೆಯನ್ನು ನೀಡಿದ್ದಾರೆ ಎನ್ನುವುದನ್ನು ಈ ವರ್ಗಗಳು ಮರೆಯಬಾರದು ಎಂದು ಹೇಳಿದರು. ಮನುವಿನ ಪ್ರಕಾರ…

Read More