ಆನೆಗೊಂದಿ ಉತ್ಸವ : ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳ ವೇಳಾ ಪಟ್ಟಿ 

ಕೊಪ್ಪಳ ಡಿ. 30 (ಕರ್ನಾಟಕ ವಾರ್ತೆ): ಕೊಪ್ಪಳ ಜಿಲ್ಲೆಯ ಐತಿಹಾಸಿಕ ಕ್ಷೇತ್ರವಾದ ಗಂಗಾವತಿ ತಾಲ್ಲೂಕಿನ ಆನೆಗೊಂದಿ ಉತ್ಸವವು 2020ರ ಜನವರಿ 09 ಮತ್ತು 10 ರಂದು ನಡೆಯಲಿದ್ದು, ಉತ್ಸವದ ಅಂಗವಾಗಿ ಜರುಗಲಿರುವ ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮಗಳ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಆನೆಗೊಂದಿ ಉತ್ಸವ ಆಚರಣೆ ಸಮಿತಿ ಅಧ್ಯಕ್ಷರಾದ ಪಿ.ಸುನೀಲ್ ಕುಮಾರ್ ಅವರು ತಿಳಿಸಿದ್ದಾರೆ.   ಉತ್ಸವದ ಅಂಗವಾಗಿ ಈಗಾಗಲೇ ಉತ್ಸವದ ಲಾಂಛನ ಮತ್ತು ಶೀರ್ಷಿಕೆ, ಪ್ರೋಮೋ ಬಿಡುಗಡೆ ಮಾಡಲಾಗಿದೆ.  ಅಲ್ಲದೇ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ಪ್ರಬಂಧ ಸ್ಪರ್ಧೆ ಜರುಗಿಸಲಾಗಿದೆ.  ಜನವರಿ. 02 ರಿಂದ ನಡೆಯಲಿರುವ ವಿವಿಧ ಕಾರ್ಯಕ್ರಮಗಳ ವಿವರ ಇಂತಿದೆ.    ಸ್ಪರ್ಧೆ ಹಾಗೂ ವಿವಿಧ ಕಾರ್ಯಕ್ರಮಗಳ ವಿವರ;  ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆಯನ್ನು ಜನವರಿ. 02 ರಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಬಾಲಕಿಯರ ಸರ್ಕಾರಿ ಪದವಿ…

Read More