ವಿಕೋಪ ನಿರ್ವಹಣೆಗೆ ಯೋಜನೆ ಸಹಕಾರಿ : ಬಾಲಚಂದ್ರ

ಕೊಪ್ಪಳ ಜೂ  : ಕೊಪ್ಪಳ ಜಿಲ್ಲಾ ವಿಕೋಪ ನಿರ್ವಹಣೆಯನ್ನು ಯಶಸ್ವಿಯಾಗಿ ನಿರ್ವಹಿಸಲು ಜಿಲ್ಲಾ ಮಟ್ಟದ ವಿಕೋಪ ನಿರ್ವಹಣಾ ಯೋಜನೆ ಸಹಕಾರಿಯಾಗುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಬಾಲಚಂದ್ರ ಹೇಳಿದರು. ಅವರು (ಜೂನ್. 06 ಹಾಗೂ 07 ರಂದು) ಕೊಪ್ಪಳ ಜಿಲ್ಲಾಡಳಿತ ಹಾಗೂ ವಿಕೋಪ ನಿರ್ವಹಣಾ ಕೇಂದ್ರ, ಆಡಳಿತ ತರಬೇತಿ ಸಂಸ್ಥೆ, ಮೈಸೂರು ಇವರ ಸಹಯೋಗದಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆಯನ್ನು ಪರಿಷ್ಕರಿಸುವ ಸಲುವಾಗಿ, ಜಿಲ್ಲಾ ತರಬೇತಿ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ 02 ದಿನಗಳ ಕಾರ್ಯಗಾರ ಉದ್ಘಾಟಿಸಿ ಮಾತನಾಡಿದರು. ವಿಕೋಪ ನಿರ್ವಹಣಾ ಕಾಯಿದೆ-2005 ರ ಪ್ರಕಾರ ನಮ್ಮ ದೇಶದ ಪ್ರತಿ ಜಿಲ್ಲೆಯಲ್ಲಿ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರ ಹಾಗೂ ಜಿಲ್ಲಾ ವಿಕೋಪ ನಿರ್ವಹಣಾ ಯೋಜನೆ ಕಡ್ಡಾಯವಾಗಿ ಇರಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ತಮ್ಮ- ತಮ್ಮ ಇಲಾಖೆ ಮಾಹಿತಿಗಳೊಂದಿಗೆ ವಿಕೋಪ ನಿರ್ವಹಣಾ ಯೋಜನೆಯ ಪರಿಷ್ಕರಣೆಗೆ ಸಹಕರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಾಲಚಂದ್ರ ತಿಳಿಸಿದರು.…

Read More