ಜಾತಿ ಭೇದಗಳನ್ನು ತೊಡೆದುಹಾಕಲು ದಾಸ ಸಾಹಿತ್ಯ ಕೊಡುಗೆ ಮಹತ್ವದ್ದು- ಬಸವರಾಜ ರಾಯರಡ್ಡಿ

 ಸಮಾಜದಲ್ಲಿ ಮನೆ ಮಾಡಿರುವ ಅಸಮಾನತೆ, ಮೂಢನಂಬಿಕೆ, ಜಾತಿ, ಲಿಂಗ ಭೇದವನ್ನು ತೊಡೆದು ಹಾಕುವ ನಿಟ್ಟಿನಲ್ಲಿ ಕನಕದಾಸರು ಮನುಕುಲಕ್ಕೆ ದಾಸ ಸಾಹಿತ್ಯದ ಮಹತ್ವದ ಕಾಣಿಕೆ ನೀಡಿದ್ದಾರೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಮಂತ್ರಿಗಳಾದ ಬಸವರಾಜ ರಾಯರಡ್ಡಿ ಅವರು ಹೇಳಿದರು ಜಿಲ್ಲಾಡಳಿತದ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಗುರುವಾರದಂದು ಏರ್ಪಡಿಸಲಾಗಿದ್ದ ಭಕ್ತ ಕನಕದಾಸರ ಜಯಂತಿ ಆಚರಣೆ ಸಮಾಂಭದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕನಕದಾಸರು ಈ ನಾಡು ಕಂಡ ಶ್ರೇಷ್ಠ ಕವಿಗಳು.  ಅವರ ವಿಚಾರಗಳು ಈಗಿನ ಕಾಲಕ್ಕೆ ಹೆಚ್ಚು ಪ್ರಸ್ತುತವೆನಿಸುತ್ತವೆ.  ಜನಸಾಮಾನ್ಯರಲ್ಲಿ ಮಾನವೀಯ ಮೌಲ್ಯಗಳನ್ನು ಬೆಳೆಸಲು ದಾಸ ಸಾಹಿತ್ಯ, ಭಕ್ತಿ ಪಂಥದ ಮೂಲಕ ಮನುಕುಲಕ್ಕೆ ಅತ್ಯುತ್ತಮ ಸಂದೇಶವನ್ನು ಕನಕದಾಸರು ಕೊಟ್ಟಿದ್ದಾರೆ.  ಮಾನವನ ಒಳಿತಿಗಾಗಿ ಅವರ ಕೊಡುಗೆಯನ್ನು ನಾವು ಸ್ಮರಿಸಲೇಬೇಕು.  ಕೆಲ ಪಟ್ಟಭದ್ರ ಹಿತಾಸಕ್ತಿಗಳು ಧರ್ಮವನ್ನು ಹಿಡಿದುಕೊಂಡು ಮೆರೆದ ಪರಿಣಾಮವಾಗಿ, ಸಮಾಜದಲ್ಲಿ ಜಾತಿ ಭೇದ, ಲಿಂಗ ಭೇದಕ್ಕೆ…

Read More