ಪೌರತ್ವ ಕಾಯ್ದೆ ವಿರೋಧಿಸಿ ಕೊಪ್ಪಳದಲ್ಲಿ ಬೃಹತ್ ಪ್ರತಿಭಟನೆ

ವಿವಿಧ ಸಂಘಟನೆಗಳಿಂದ ಸಿಎಎ ಹಾಗೂ ಎನ್‌ಆರ್‌ಸಿ ರದ್ಧತಿಗೆ ಒತ್ತಾಯ ಕೊಪ್ಪಳ ಡಿ.೨೧: ಕೇಂದ್ರ ಸರಕಾರ ಜಾರಿಗೆ ತಂದಿರುವ ಪೌರತ್ವ ಕಾಯ್ದೆ ವಿರೋಧಿಸಿ ಕೊಪ್ಪಳ ನಗರದ ಈದ್ಗಾ ಮೈದಾನದಲ್ಲಿ ಶನಿವಾರ ಬೆಳಿಗ್ಗೆ ಮುಸ್ಲಿಂ ಮತ್ತು ದಲಿತ ಸಂಘಟನೆ ಸೇರಿ ವಿವಿಧ ಪ್ರಗತಿಪರ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸಿ ಕೂಡಲೇ ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ರದ್ಧುಗೊಳಿಸುವಂತೆ ಒತ್ತಾಯಿಸಿದರು. ಈಗಾಗಲೇ ರಾಜ್ಯ ಮತ್ತು ರಾಷ್ಟ್ರದಾದ್ಯಂತ ಪ್ರತಿಭಟನೆ ನಡೆಯುತ್ತಿದ್ದು, ಮುಂಜಾಗ್ರತೆ ಕ್ರಮವಾಗಿ ರಾಜ್ಯ ಸರಕಾರ ೧೪೪ ಕಲಂ ಜಾರಿಗೊಳಿಸಿ ನಿಷೇಧಾಜ್ಞೆ ಮಾಡಲಾಗಿದ್ದು, ಪ್ರತಿಭಟನೆ, ಮೆರವಣಿಗೆಗೆ ಜಿಲ್ಲಾಡಳಿತ ಅವಕಾಶ ನೀಡಲಿಲ್ಲ. ಅದರ ಬದಲಾಗಿ ಇಲ್ಲಿನ ಈದ್ಗಾ ಮೈದಾನದಲ್ಲಿ ಬೃಹತ್ ಸಂಖ್ಯೆಯಲ್ಲಿ ಸೇರಿ ಪೌರತ್ವ ಕಾಯ್ದೆಗೆ ವಿರೋಧಿಸಿ ನಂತರ ಅದೇ ಸ್ಥಳದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ದೇಶದ ಪೌರತ್ವ ನೀಡುವಲ್ಲಿ ಧಾರ್ಮಿಕ ಆಧಾರದಲ್ಲಿ ತಾರತಮ್ಯ ನಮ್ಮ ಸಂವಿಧಾನದ ಪರಿಚ್ಛೇದ ೧೪…

Read More