ದಿಟ್ಟ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಖಂಡಿಸಿ ತೀವ್ರ ಪ್ರತಿಭಟನೆ

ಕೊಪ್ಪಳ :ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ ಪ್ರತಿಭಟನೆ.ಅಶೋಕ ವೃತ್ತದಲ್ಲಿ ಟೈರ್ ಗೆ ಬೆಂಕಿ ಹಚ್ಚಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ.ಪ್ರಗತಿಪರ ಹೊರಾಟಗಾರರು, ಪತ್ರಕರ್ತರಿಂದ ಪ್ರತಿಭಟನೆ.ಎಮ್.ಎಮ್ ಕಲಬುರ್ಗಿ ಹಾಗೂ ಗೌರಿ ಲಂಕೇಶ್ ಹಂತಕರನ್ನು ಕೂಡಲೇ ಬಂದಿಸುವಂತೆ ಆಗ್ರಹಿಸಿ ಪ್ರತಿಭಟನೆ.ರಾಜ್ಯ ಸರ್ಕಾರ ಆರೊಪಿಗಳನ್ನು ಬಂಧಿಸುವಲ್ಲಿ ವಿಫಲವಾಗಿದೆ.ಗೌರಿ ಲಂಕೇಶ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕು.ಅಭಿವ್ಯಕ್ತಿ ಸ್ವಾತಂತ್ರ್ಯದ ಹತ್ತಿಕ್ಕುತ್ತಿರುವವರನ್ನುಹಂತಕರನ್ನು ಕೂಡಲೇ ಬಂಧಿಸಬೇಕು, ಬರಹಗಾರರಿಗೆ  ಸಾಹಿತಿಗಳಿಗೆ ರಕ್ಷಣೆ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ.  ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್ ಅಮಾನುಷ ಹತ್ಯೆ ಖಂಡಿಸಿ ಕೊಪ್ಪಳ ಜಿಲ್ಲೆಯಾದ್ಯಂತ ತೀವ್ರ ಪ್ರತಿಭಟನೆ ನಡೆಸಲಾಯಿತು. ಹಲವಾರು ಹೋರಾಟಗಳಲ್ಲಿ ಭಾಗೀಯಾಗಿ ಸಮಾಜಮುಖಿ ಚಿಂತನೆಗಳಲ್ಲಿ ಮತ್ತು ಹೋರಾಟಗಳಲ್ಲಿ ತೊಡಗಿಸಿಕೊಂಡಿದ್ದ ಗೌರಿ ಲಂಕೇಶ್ ರ ಹತ್ಯೆಗೆ ಕೊಪ್ಪಳದಲ್ಲಿ ತೀವ್ರ ಆಕ್ರೋಶವ್ಯಕ್ತವಾಗಿದೆ. ಕೊಪ್ಪಳ ನಗರದ ಅಶೋಕ ಸರ್ಕಲ್ ನಲ್ಲಿ ಪ್ರತಿಭಟನೆ ನಡೆಸಿದ ಪ್ರಗತಿ ಪರ ಚಿಂತಕರು, ಹೋರಾಟಗಾರರು, ಪತ್ರಕರ್ತರು, ಬರಹಗಾರರು ತೀವ್ರ ಆಕ್ರೋಶವನ್ನು…

Read More