ಮಾ. 14 ಮತ್ತು 15 ರಂದು ಕೊಪ್ಪಳದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ

ಕೊಪ್ಪಳ,ಮಾ.  : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೊಪ್ಪಳ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾ. 14 ಮತ್ತು 15 ರಂದು ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದು, ಉದ್ಘಾಟನಾ ಸಮಾರಂಭವು ಮಾ. 14 ಬೆಳಿಗ್ಗೆ 09 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಸಾರಿಗೆ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷö್ಮಣ ಸಂಗಪ್ಪ ಸವದಿ ಅವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಉಪಮುಖ್ಯಮಂತ್ರಿಗಳು, ಉನ್ನತ ಶಿಕ್ಷಣ ಐಟಿ & ಬಿಟಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಸಚಿವರಾದ ಡಾ.ಅಶ್ವಥ್ ನಾಯಯಣ್ ಸಿ.ಎನ್ ಅವರು ಘನ ಉಪಸ್ಥಿತರಿರುವರು. ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ಹೆಚ್.ವಿಶ್ವನಾಥರೆಡ್ಡಿ, ಸಂಸದ ಕರಡಿ ಸಂಗಣ್ಣ, ಶಾಸಕರುಗಳಾದ…

Read More