ನಕಲಿ ಸ್ಯಾನಿಟೈಸರ್ ತಯಾರಿಸುತ್ತಿದ್ದ ಇಬ್ಬರ ಬಂಧನ; 56 ಲಕ್ಷ ರೂ. ಮೌಲ್ಯದ ವಸ್ತುಗಳು ಜಪ್ತಿ

ಬೆಂಗಳೂರು, ಮಾ.20: ಕೊರೋನ ವೈರಸ್ ಅನ್ನೇ ಬಂಡವಾಳ ಮಾಡಿಕೊಂಡು ನಕಲಿ ಹ್ಯಾಂಡ್ ಸ್ಯಾನಿಟೈಸರ್, ಹ್ಯಾಂಡ್ ರಬ್‌ಗಳನ್ನು ಸಿದ್ಧಪಡಿಸುತ್ತಿದ್ದ ಜಾಲವನ್ನು ಭೇದಿಸಿರುವ ಸಿಸಿಬಿ ಪೊಲೀಸರು, 56 ಲಕ್ಷ ರೂ. ಮೌಲ್ಯದ ನಕಲಿ ವಸ್ತುಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ನಗರದ ಜ್ಯೋತಿ ಕೆಮಿಕಲ್ಸ್ ಹಾಗೂ ಕಸ್ತೂರಬಾ ನಗರದ 3ನೆ ಕ್ರಾಸ್‌ನ ಸ್ವಾತಿ ಅಂಡ್ ಕೋ ಗೋಡೌನ್‌ಗಳ ಮೇಲೆ ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದರು. ಪ್ರಕರಣ ಸಂಬಂಧ ನಕಲಿ ಹ್ಯಾಂಡ್ ಸ್ಯಾನಿಟೈಸರ್ ಮತ್ತು ಹ್ಯಾಂಡ್ ರಬ್‌ಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಕಸ್ತೂರಬಾ ನಗರದ ರಾಜು(43), ಚಾಮರಾಜಪೇಟೆಯ ಎಸ್‌ಎಲ್ ರೆಸಿಡೆನ್ಸಿಯ ಚಂದನ್(64) ಎಂಬುವರನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿದೆ ಎಂದು ಮಾಹಿತಿ ನೀಡಿದರು. ಬಂಧಿತರು, 50 ಲೀ.ನ ಆಲ್ಕೋಹಾಲ್‌ಗೆ ಒಂದೂವರೆ ಸ್ಪೂನ್‌ನಷ್ಟು ಬ್ರಿಲಿಯಂಟ್ ಬ್ಲೂ ಕಲರ್ ಅನ್ನು…

Read More