ಸಿಎಂ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲು: ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇತ್ತೀಚೆಗೆ ಚುನಾವಣಾ ಬಹಿರಂಗ ಪ್ರಚಾರದ ವೇಳೆ ‘ಲಿಂಗಾಯತ ಮತಗಳು ಬೇರೆ ಕಡೆ ಹೋಗಬಾರದು’ ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ ಪ್ರತಿಪಕ್ಷಗಳು ನೀಡಿದ್ದ ದೂರನ್ನು ಸ್ವೀಕರಿಸಿದ್ದು, ಸಿಎಂ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ -ಸಂಜೀವ್ ಕುಮಾರ್, ಮುಖ್ಯ ಚುನಾವಣಾಧಿಕಾರಿ ಬೆಂಗಳೂರು, ಡಿ.2: ರಾಜ್ಯದ ಹದಿನೈದು ಕ್ಷೇತ್ರಗಳ ಉಪಚುನಾವಣೆಗೆ ಡಿ.5ರಂದು ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ, ಬಹಿರಂಗ ಪ್ರಚಾರಕ್ಕೆ ನಾಳೆ(ಡಿ.3) ಸಂಜೆ 6 ಗಂಟೆಗೆ ತೆರೆಬೀಳಲಿದೆ. ಡಿ.4ರಂದು ಅಭ್ಯರ್ಥಿಗಳು ಮನೆ-ಮನೆಗೆ ತೆರಳಿ ಮತಯಾಚನೆ ಮಾಡಲು ಅವಕಾಶವಿದೆ. ಮತದಾನ ಆರಂಭಕ್ಕೂ 48 ಗಂಟೆ ಮೊದಲು ಮತಯಾಚನೆ ಕೊನೆಗೊಳಿಸಬೇಕು ಎಂದು ಚುನಾವಣಾ ಆಯೋಗದ ಸೂಚನೆ ನೀಡಿದೆ. ಮುಕ್ತ ಹಾಗೂ ನ್ಯಾಯಸಮ್ಮತ ಮತದಾನಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ತಪ್ಪದೆ ಪಾಲಿಸಬೇಕು ಎಂದು ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಹೇಳಿದ್ದಾರೆ. ಸೋಮವಾರ ಚುನಾವಣಾ ಆಯೋಗದ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.11ರಿಂದ ಆರಂಭವಾದ ಉಪಚುನಾವಣಾ ಪ್ರಕ್ರಿಯೆ,…

Read More