ಮಕ್ಕಳಿಗೆ ತಪ್ಪದೆ ದಡಾರ-ರುಬೆಲ್ಲಾ ಲಸಿಕೆ ಹಾಕಿಸಿ: ರಾಘವೇಂದ್ರ ಹಿಟ್ನಾಳ

ಕೊಪ್ಪಳ : ಮಕ್ಕಳಿಗೆ ತೀವ್ರವಾಗಿ ಕಾಡುವ ರೋಗಗಳ ತಡೆಗಾಗಿ ರಾಷ್ಟ್ರೀಯ ಆರೋಗ್ಯ ಮಿಷನ್ ವತಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ಫೆ. ೦೭ ರಿಂದ ೨೮ ರವರೆಗೆ ದಡಾರ ಮತ್ತು ರುಬೆಲ್ಲಾ ಲಸಿಕಾ ಅಭಿಯಾನವನ್ನು ಹಮ್ಮಿಕೊಂಡಿದ್ದು, ೦೯ ತಿಂಗಳಿನಿಂದ ೧೫ ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ  ಶಾಸಕ ಕೆ. ರಾಘವೇಂದ್ರ ಹಿಟ್ನಾಳ್  ಕರೆ ನೀಡಿದರು. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸಾರ್ವಜನಿಕ ಶಿಕ್ಷಣ ಇಲಾಖೆ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಕೊಪ್ಪಳದಲ್ಲಿ ಆಯೋಜಿಸಿದ ದಡಾರ-ರುಬೆಲ್ಲಾ ಲಸಿಕಾ ಜಾಗೃತಿ ಜಾಥಾ ಹಾಗೂ ಬೈಕ್ ರ್‍ಯಾಲಿಗೆ ನಗರದ ಗೌರಿಶಂಕರ ದೇವಸ್ಥಾನ ಬಳಿ ಚಾಲನೆ ನೀಡಿ ಅವರು ಮಾತನಾಡಿದರು.ಆರೋಗ್ಯಪೂರ್ಣ ಸಮಾಜ ನಿರ್ಮಾಣವಾಗಲು, ಮಕ್ಕಳು, ಸ್ವಸ್ಥ್ಯರಾಗಿರಬೇಕು. ಮಕ್ಕಳೇ ಭವಿಷ್ಯದ ಪ್ರಜೆಗಳಾಗಿರುವುದರಿಂದ, ಮಕ್ಕಳ ಆರೋಗ್ಯದ ಕುರಿತು ಸರ್ಕಾರ ವಿಶೇಷ ಕಾಳಜಿ ವಹಿಸುತ್ತದೆ. ಮಕ್ಕಳನ್ನು ಕಾಡುವ ವಿವಿಧ ರೋಗಗಳ ತಡೆಗೆ…

Read More