ಗೋಶಾಲೆಗಳ ಸಹಾಯ ಧನ ಪ್ರಸ್ತಾವನೆ ಸಲ್ಲಿಕೆಗೆ ಕ್ರಮ : ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾ

ಕೊಪ್ಪಳ ಆ ): ಜಿಲ್ಲೆಯ ಗೋಶಾಲೆಗಳ ಶೆಡ್ ನಿರ್ಮಾಣ, ಜಾನುವಾರುಗಳ ನಿರ್ವಹಣೆಗೆ ಸಂಬಂಧಿಸಿದಂತೆ 2019-20ನೇ ಸಾಲಿನಲ್ಲಿ ಗೋಶಾಲೆಗಳಿಗೆ ಬೆಂಬಲ ನೀಡುವ ಕಾರ್ಯಕ್ರಮದಡಿ ಸರ್ಕಾರದಿಂದ ನಿಗದಿಪಡಿಸಿದ ಸಹಾಯ ಧನ ಕುರಿತು ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಸಲ್ಲಿಸಿದ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಸೈಯಿದಾ ಅಯಿಷಾರವರು ತಿಳಿಸಿದರು. ಅವರ ಇಂದು (ಆಗಸ್ಟ್.17) ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಹಾಗೂ ಜಿಲ್ಲಾ ಪ್ರಾಣಿ ದಯಾ ಸಂಘದಿಂದ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಪ್ರಾಣಿ ದೌರ್ಜನ್ಯ ತಡೆ ಹಾಗೂ ಕಲ್ಯಾಣ ಸಮಿತಿಯ ಕಾರ್ಯ ಚಟುವಟಿಕೆಗಳ ಬಗ್ಗೆ ಪರಿಶೀಲನಾ ಹಾಗೂ 2019-20ನೇ ಸಾಲಿನ ಗೋಶಾಲೆಗಳಿಗೆ ಸಹಾಯ ಧನ ಮಂಜೂರಾತಿಗಾಗಿ ಪ್ರಸ್ತಾವನೆಗಳನ್ನು ಅನುಮೋದಿಸುವ ಕುರಿತಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗೋಶಾಲೆಗಳಲ್ಲಿರುವ ಜಾನುವಾರುಗಳ ರಕ್ಷಣೆ, ನಿರ್ವಹಣೆ, ಮೇವು ಅಭಿವೃದ್ಧಿ, ಸಾವಯವ ಗೊಬ್ಬರ ಘಟಕ ಸ್ಥಾಪನೆ…

Read More