ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪಿ ಶಿಕ್ಷಕ ಅಂದಪ್ಪ ನಿಂಗೋಜಿಗೆ 10 ವರ್ಷ ಜೈಲು ಶಿಕ್ಷೆ

ಕೊಪ್ಪಳ : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಶಿಕ್ಷಕ ಅಂದಪ್ಪ ನಿಂಗೋಜಿ ಎಂಬ ವ್ಯಕ್ತಿಯ ವಿರುದ್ಧದ ಆರೋಪ ಸಾಬೀತಾಗಿದ್ದು, ಅಪರಾಧಿಗೆ ಕೊಪ್ಪಳ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರು ಹಾಗೂ ತ್ವರಿತ ವಿಲೇವಾರಿ ನ್ಯಾಯಾಧೀಶರಾದ(ಪೋಕ್ಸೋ) ಶಂಕರ ಎಂ.ಜಾಲವಾದಿ ಅವರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿ ತೀರ್ಪು ನೀಡಿದ್ದಾರೆ.
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಶಿಕ್ಷಕ ಅಂದಪ್ಪ ನಿಂಗೋಜಿ ಎಂಬ ವ್ಯಕ್ತಿ ಭಾದಿತ ಬಾಲಕಿಗೆ ಆಗಾಗ ಸ್ಟಾಪ್ ರೂಮ್‌ಗೆ ಕರೆದು ಲೈಂಗಿಕ ಕಿರುಕುಳ ನೀಡುತ್ತಿದ್ದು, 2015 ಜನವರಿ.26 ರ ಧ್ವಜಾರೋಹಣವಾದ 3 ರಿಂದ 4 ದಿನಗಳ ನಂತರ ಅಪ್ರಾಪ್ತ ಬಾಲಕಿ ತನ್ನ ಮನೆಯಲ್ಲಿದ್ದಾಗ ಆರೋಪಿಯು ತನ್ನ ಸ್ಕೂಟಿ ಮೇಲೆ ಕೂಡಿಸಿಕೊಂಡು ಯಲಬುರ್ಗಾದಲ್ಲಿರುವ ತನ್ನ ಮನೆಗೆ ಕರೆದುಕೊಂಡು ಹೋಗಿ ಅಪ್ರಾಪ್ತಳು ಪರಿಶಿಷ್ಟ ಜಾತಿಗೆ ಸೇರಿದವಳು ಎಂದು ತಿಳಿದಿದ್ದರೂ ಅವಳಿಗೆ ಬಲತ್ಕಾರ ಸಂಭೋಗ ಮಾಡಿದ್ದಲ್ಲದೇ 2015ರ ಅಕ್ಟೋಬರ್. 12 ರಂದು ಆರೋಪಿತನು ಭಾದಿತಳ ಮನೆಯ ಹತ್ತಿರ ಬಂದು ಪುನಃ ತನ್ನ ಸ್ಕೂಟಿ ಮೇಲೆ ಮನೆಗೆ ಕರೆದುಕೊಂಡು ಬಂದು ಮತ್ತೊಮ್ಮೆ ಬಲತ್ಕಾರ ಸಂಭೋಗ ಮಾಡಿದ ಆರೋಪವು ತನಿಖೆಯಲ್ಲಿ ಸಾಬೀತಾಗಿದ್ದರಿಂದ ಕೊಪ್ಪಳ ಪೊಲೀಸ್ ಉಪಾಧೀಕ್ಷಕರು ಆರೋಪಿಯ ವಿರುದ್ಧ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದಲ್ಲಿ ಆರೋಪಿತನ ಮೇಲಿನ ಆರೋಪಗಳು ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ಹಾಗೂ ರೂ. 30,000 ಗಳ ದಂಡ ವಿಧಿಸಿದ್ದಾರೆ. ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕರಾದ ಎಂ.ಎ ಪಾಟೀಲ, ಕೆ.ನಾಗರಾಜ ಆಚಾರ್ ಹಾಗೂ ಟಿ.ಅಂಬಣ್ಣ ಇವರು ಪ್ರಕರಣ ನಡೆಸಿದ್ದಾರೆ ಎಂದು ಜಿಲ್ಲಾ ಹಾಗೂ ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕರಾದ ಬಂಡಿ ಅಪರ್ಣ ಎಂ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Please follow and like us:
error