ಕೊಪ್ಪಳ ಸುಲಿಗೆ ಅಪರಾಧಿಗಳಿಗೆ ಶಿಕ್ಷೆ


ಕೊಪ್ಪಳ,  : ಕೊಪ್ಪಳ ನಗರ ನಿವಾಸಿಗಳಾದ ಗುಲಾಬಶಾ ವಲಿ ಹಾಗೂ ಮಹ್ಮದ ರಫಿ ಇವರು ಹಣ ಮತ್ತು ಮೊಬೈಲ್ ಕಿತ್ತುಕೊಂಡು ಹೋದ ಆರೋಪ ಸಾಬೀತಾಗಿದ್ದು, ಅಪರಾಧಿಗಳಿಗೆ 02 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ತಲಾ 5 ಸಾವಿರ ರೂ.ಗಳ ದಂಡವನ್ನು ವಿಧಿಸಿ ಕೊಪ್ಪಳದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸಿ.ಜೆ.ಎಂ ನ್ಯಾಯಾಧೀಶರಾದ ಕುಮಾರ್ ಎಸ್. ಅವರು ತೀರ್ಪು ಪ್ರಕಟಿಸಿದ್ದಾರೆ.
ಆರೋಪಿತರು 2020 ರ ಫೆಬ್ರವರಿ 01 ರಂದು ರಾತ್ರಿ 8 ಗಂಟೆ ಸುಮಾರಿಗೆ ಕೊಪ್ಪಳ ನಗರದ ಈಶ್ವರ ಗುಡಿ ಪಾರ್ಕನಲ್ಲಿ ಕೊಪ್ಪಳ ನಗರ ನಿವಾಸಿ ಇನಾಯತ್ ಎನ್ನುವವರಿಗೆ ಚಾಕು ತೋರಿಸಿ ಹೆದರಿಸಿ, ಜೇಬಿನಲ್ಲಿದ್ದ ನಗದು ಹಣ ರೂ. 2000 ಹಾಗೂ ರೂ. 1000 ಬೆಲೆ ಬಾಳುವ ಮೊಬೈಲ್‌ನ್ನು ಕಿತ್ತುಕೊಂಡು ಹೋಗಿದ್ದರು. ಈ ಕುರಿತು ಕೊಪ್ಪಳ ನಗರ ಪೊಲೀಶ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿತರ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದ್ದಾರೆ.
ಪ್ರಕರಣದ ತನಿಖೆ ನಡೆಸಿದ್ದ ನಗರ ಪೊಲೀಸ್ ಠಾಣೆಯ ಪಿ.ಐ ಮೌನೇಶ್ವರ ಮಾಲಿಪಾಟೀಲ್ ಅವರು ಆರೋಪಿತರ ವಿರುದ್ಧ ದೋಷಾರೋಪಣ ಪಟ್ಟಿಯನ್ನು ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕರಾದ ಜಿ.ಎಸ್.ಪಾಟೀಲ್ ಅವರು ವಾದ ಮಂಡಿಸಿದ್ದರು .

Please follow and like us:
error