ಅಕ್ರಮ ಮದ್ಯ ಸರಬರಾಜು : ನೀತಿ ಸಂಹಿತೆ ತಂಡಗಳಿಂದ ದಾಳಿ, ನಾಲ್ವರ ಬಂಧನ

ಕೊಪ್ಪಳ ಮಾ. :ಕೊಪ್ಪಳ ಜಿಲ್ಲೆಯ ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅಕ್ರಮ ಮದ್ಯ ಸರಬರಾಜು ಮಾಡುತ್ತಿರುವ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿ ತಂಡದವರು ದಾಳಿ ನಡೆಸಿ ನಾಲ್ಕು ಜನರನ್ನು ಬಂಧಿಸಿದ್ದಾರೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಮಾ. ೨೮ರ ತಡರಾತ್ರಿ ಮತದಾರರನ್ನು ಸೆಳೆಯುವ ನಿಟ್ಟಿನಲ್ಲಿ ಅಕ್ರಮ ಮದ್ಯ ಸರಬರಾಜು ಮಾಡುತ್ತಿರುವುದಾಗಿ ಸ್ವೀಕೃತವಾದ ದೂರುಗಳನ್ವಯ ಗಂಗಾವತಿ ವಿಧಾನಸಭಾ ಕ್ಷೇತ್ರದ ಆನೆಗುಂದಿ, ವಿರುಪಾಪುರ, ಗಡ್ಡಿ ಹಾಗೂ ಸಾಣಾಪುರ ಗ್ರಾಮಗಳ ವಿವಿಧ ರೆಸಾರ್ಟ ಮತ್ತು ಹೊಟೆಲ್‌ಗಳಲ್ಲಿ ಏಕಕಾಲಕ್ಕೆ ಮಾದರಿ ನೀತಿ ಸಂಹಿತೆ ಜಾರಿ ತಂಡಗಳು ದಾಳಿ ನಡೆಸಿದರು. ದಾಳಿಯಲ್ಲಿ ನಾಲ್ಕು ಜನರನ್ನು ಬಂಧಿಸಿದ್ದು, ಮಾ. ೨೯ ರಂದು ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆ ೯೨(ಒ) ರಡಿಯಲ್ಲಿ ೪ ಪ್ರಕರಣಗಳನ್ನು ಹಾಗೂ ಕರ್ನಾಟಕ ಅಬಕಾರಿ ಕಾಯ್ದೆ ೧೯೬೫ರ ಸೆಕ್ಷನ್ ೧೫ಎ ರಡಿಯಲ್ಲಿ ೧ ಪ್ರಕರಣವನ್ನು ದಾಖಲಿಸಲಾಗಿದೆ

Please follow and like us:
error