ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಕುಲ್ ದೀಪ್ ಸೇಂಗರ್ ನನ್ನು ಬಂಧಿಸಿದ ಸಿಬಿಐ

ಲಕ್ನೋ, ಎ. : ದೇಶಾದ್ಯಂತ ಸುದ್ದಿಯಾಗಿದ್ದ ಉನ್ನಾವೋ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಬಿಜೆಪಿ ಶಾಸಕ ಕುಲ್ ದೀಪ್ ಸಿಂಗ್ ಸೇಂಗರ್ ನನ್ನು ಇಂದು ಸಿಬಿಐ ಬಂಧಿಸಿದೆ.

ಈ ಪ್ರಕರಣದಲ್ಲಿ ಆರೋಪಿಯಾಗಿರುವ ಸೇಂಗರ್ ನನ್ನು ಬಂಧಿಸುವಂತೆ ಅಲಹಾಬಾದ್ ಹೈಕೋರ್ಟ್ ಸಿಬಿಐ ತನಿಖಾಧಿಕಾರಿಗೆ ಇಂದು ಆದೇಶಿಸಿತ್ತು. ಶಾಸಕನನ್ನು ವಶಕ್ಕೆ ಪಡೆಯಲಾಗಿದೆಯೇ ಹೊರತು ಬಂಧಿಸಿಲ್ಲ ಎಂದು ತಿಳಿಸಿದಾಗ ಮುಖ್ಯ ನ್ಯಾಯಾಧೀಶ ದಿಲೀಪ್ ಭೋಸಾಲ ಹಾಗು ಜ.ಸುನೀತ್ ಕುಮಾರ್ ಅವರಿದ್ದ ವಿಭಾಗೀಯ ಪೀಠ ಶಾಸಕನನ್ನು ಬಂಧಿಸುವಂತೆ ಆದೇಶಿಸಿತ್ತು.