ಕೃಷ್ಣ ಮೃಗಗಳ ಬೇಟೆ ಪ್ರಕರಣ; ಸಲ್ಮಾನ್ ಖಾನ್ ಗೆ 5 ವರ್ಷ ಜೈಲು ಶಿಕ್ಷೆ

ಹೊಸದಿಲ್ಲಿ, ಎ.5: ಕೃಷ್ಣ ಮೃಗಗಳನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಿಸಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಜೋಧ್ ಪುರದ ಸಿಜೆಎಂ ನ್ಯಾಯಾಲಯ 5 ವರ್ಷ ಜೈಲು ಶಿಕ್ಷೆ  ಮತ್ತು 10 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.

ಕೃಷ್ಣ ಮೃಗಗಳನ್ನು ಬೇಟೆಯಾಡಿದ ಪ್ರಕರಣದಲ್ಲಿ ಸಲ್ಮಾನ್ ಖಾನ್ ದೋಷಿ ಎಂದು ರಾಜಸ್ಥಾನದ ಜೋಧ್ ಪುರ  ಸಿಜೆಎಂ ನ್ಯಾಯಾಲಯದ ನ್ಯಾಯಾಶಧೀಶ ದೇವ್ ಕುಮಾರ್ ಖತ್ರಿ ಗುರುವಾರ ತೀರ್ಪು ನೀಡಿ, ಶಿಕ್ಷೆಯ ಪ್ರಮಾಣ ಪ್ರಕಟಿಸಿದರು.

1998ರಲ್ಲಿ  ‘ಹಮ್ ಸಾಥ್ ಸಾಥ್ ಹೈ’ ಚಿತ್ರದ ಶೂಟಿಂಗ್ ವೇಳೆ ಎರಡು ಕೃಷ್ಣ ಮೃಗ ಬೇಟೆಯಾಡಿದ ಪ್ರಕರಣದ ಆರೋಪದಲ್ಲಿ ಸಲ್ಮಾನ್ ಖಾನ್ ಹೊರತುಪಡಿಸಿ ಇತರೆ ಎಲ್ಲ ಆರೋಪಿಗಳನ್ನು ಖುಲಾಸೆಗೊಳಿಸಿ ನ್ಯಾಯಾಲಯ ಆದೇಶ ನೀಡಿದೆ.
ಸೈಫ್ ಅಲಿ ಖಾನ್, ಟಬು, ಸೋನಾಲಿ ಬೇಂದ್ರೆ , ನೀಲಂ ಕೊಠಾರಿ ಅವರು ದೋಷಮುಕ್ತಗೊಂಡಿದ್ದಾರೆ.

Please follow and like us:
error