ಬೆಂಗಳೂರು, ಜ.22: ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು. ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಿರ್ದಿಷ್ಟ ಸಮುದಾಯದ ಬಗ್ಗೆ ಪೂರ್ವಾಗ್ರಹ ಹೊಂದಿರುವ ಸಂಘ ಪರಿವಾರದ ನಾಯಕರು ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ ಸಾಮಾನ್ಯ ಅಪರಾಧ ಪ್ರಕರಣಗಳಿಗೂ ಕೋಮುಬಣ್ಣ ಬಳಿಯುತ್ತಿರುವುದೇ ಅಲ್ಲಿನ ಶಾಂತಿ ವ್ಯವಸ್ಥೆ ಕದಡಲು ಕಾರಣ. ತಮ್ಮ ಅಜೆಂಡಾಕ್ಕೆ ಬಳಸಲಾಗದ ಪ್ರಕರಣಗಳ ಬಗ್ಗೆ ಅವರ ಮೌನವೆ ಅವರ ದುರುದ್ದೇಶಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.
ಪೊಲೀಸರು ರಾಜಕಾರಣಿಗಳ ತಾಳಕ್ಕೆ ತಕ್ಕಂತೆ ಕುಣಿಯಲು ಹೋಗದೆ ವೃತ್ತಿಪರತೆಯಿಂದ ಕೆಲಸ ಮಾಡಬೇಕು. ಮಂಗಳೂರು ಪೊಲೀಸರು ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳಲು ಅನಗತ್ಯವಾಗಿ ಸಾರ್ವಜನಿಕರಲ್ಲಿ ಗೊಂದಲ ಸೃಷ್ಟಿಸಿ ಪರಿಸ್ಥಿತಿ ಇನ್ನಷ್ಟು ಬಿಗಡಾಯಿಸಲು ಕಾರಣವಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಂಗಳೂರು ವಿಮಾನನಿಲ್ದಾಣಕ್ಕೆ ಬಾಂಬು ಇಟ್ಟಿರುವ ಆರೋಪಿ ಆದಿತ್ಯರಾವ್ ಎಂಬವನ ಬಗ್ಗೆ ನಿಷ್ಪಕ್ಷಪಾತವಾಗಿ ನಡೆಸಿ ಸತ್ಯ ಸಂಗತಿಯನ್ನು ಬಯಲಿಗೆಳೆಯಬೇಕು ಆತನನ್ನು ಮಾನಸಿಕ ಅಸ್ವಸ್ಥನೆಂದು ಬಿಂಬಿಸಿ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯಬಾರದು.
1/3— Siddaramaiah (@siddaramaiah) January 22, 2020