ಕೊಪ್ಪಳ ಕ್ಷೇತ್ರದ ಪ್ರಗತಿಗೆ ಬಿಜೆಪಿ ಬೆಂಬಲಿಸಿ : ರಾಮಣ್ಣ ಚೌಡ್ಕಿ

ಕೊಪ್ಪಳ : ರಾಜ್ಯದಲ್ಲಿ ಆಡಳಿತ ನಡೆಸಿದ ಕಾಂಗ್ರೆಸ್ ಪಕ್ಷ ರಾಜ್ಯವನ್ನು ಅಭಿವೃದ್ಧಿಗೊಳಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ಈ ಬಾರಿ ರಾಜ್ಯದಲ್ಲಿ ಜನಪರ ಆಡಳಿತ ನೀಡಲು ಹಾಗೂ ಕೊಪ್ಪಳ ಕ್ಷೇತ್ರದ ಪ್ರಗತಿಗೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಜಿಲ್ಲಾ ಪಂಚಾಯತ್ ಸದಸ್ಯ ರಾಮಣ್ಣ ಚೌಡ್ಕಿ ಹೇಳಿದರು.
ಅವರು ಕೊಪ್ಪಳ ತಾಲೂಕಿನ ಟಣಕನಕಲ್ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಮತಯಾಚಿಸಿ ನಂತರ ಮಾತನಾಡಿ ಎಲ್ಲಾ ಸಮುದಾಯಗಳಿಗೆ ಪ್ರೀತಿ ಪಾತ್ರರಾದ ಸಂಸದ ಬಿ.ಶ್ರೀರಾಮುಲು ಅವರನ್ನು ರಾಜ್ಯದ ಉಪಮುಖ್ಯಮಂತ್ರಿ ಮಾಡಬೇಕಾಗಿದೆ ಹೀಗಾಗಿ ಬೆಜೆಪಿಯನ್ನು ಎಲ್ಲರೂ ಬೆಂಬಲಿಸಬೇಕಾಗಿದೆ, ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರು ಆತ್ಮಹತ್ಯೆ ಮಾಡಿಕೊಂಡರು ಸೂಕ್ತ ಪರಿಹಾರ ನೀಡಲಿಲ್ಲ ಹಾಗೂ ರಾಜ್ಯದಲ್ಲಿ ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡರು ಸರಿಯಾದ ತನಿಖೆ ನಡೆಸಿ ಅವರ ಕುಟುಂಬಕ್ಕೆ ಸೂಕ್ತ ನ್ಯಾಯ, ಪರಿಹಾರ ನೀಡಲಿಲ್ಲ, ಜನರ ಹಿತ ಕಾಪಾಡದ ಇಂತಹ ಕಾಂಗ್ರೆಸ್ ಸರ್ಕಾರವನ್ನು ಈ ಬಾರಿ ರಾಜ್ಯದಲ್ಲಿ-ಕೊಪ್ಪಳ ಕ್ಷೇತ್ರದಲ್ಲಿ ಕಿತ್ತು ಹಾಕಿ ರೈತರ ಸಮಸ್ಯೆಗಳಿಗೆ, ಎಲ್ಲರಿಗೂ ಸ್ಪಂದಿಸುವ ಬಿಜೆಪಿಯನ್ನು ನಾವು ಬೆಂಬಲಿಸೋಣ ಎಂದರು.
ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ ಮಾತನಾಡಿ ಅಭಿವೃದ್ಧಿ ನಿರ್ಲಕ್ಷ್ಯಗೊಳಿಸಿದ ರಾಜ್ಯ ಕಾಂಗ್ರೆಸ್ ಪಕ್ಷದಿಂದ ಜನತೆ ಬೇಸತ್ತು ಹೋಗಿದ್ದು ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಬಸವರಾಜ್ ಈಶ್ವರಗೌಡರು, ಬಿಜೆಪಿ ಮುಖಂಡರಾದ ಬಸವರಾಜ್ ಕರಡಿ, ಶಿವಪ್ಪ ಹಂದ್ರಾಳ, ಗವಿಸಿದ್ದಪ್ಪ ಬಿಸನಳ್ಳಿ, ವಿರೂಪಾಕ್ಷಗೌಡರು,ಸೇರಿದಂತೆ ಪಕ್ಷದ ಮುಖಂಡರು,ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Please follow and like us:
error