ಕೊಪ್ಪಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ : ಗವಿಸಿದ್ದಪ್ಪ ಕರಡಿ

ಕೊಪ್ಪಳ : ಕೊಪ್ಪಳ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಿ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಗವಿಸಿದ್ದಪ್ಪ ಕರಡಿ ಹೇಳಿದರು.
ಅವರು ಕೊಪ್ಪಳ ತಾಲೂಕಿನ ಚಿಲವಾಡಗಿ ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಪರ ಮತಯಾಚನೆ ಕೈಗೊಂಡು ಶನಿವಾರ ಮಾತನಾಡಿ, ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾದ ನಂತರ ದೇಶ ಅಭಿವೃದ್ಧಿಯತ್ತ ಸಾಗಿದೆ. ರಾಜ್ಯದಲ್ಲಿ ಬಿಜೆಪಿಗೆ ಈ ಬಾರಿ ಅಧಿಕ ಸ್ಥಾನ ಲಭಿಸಿ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗುವುದು ನಿಶ್ಚಿತ. ರಾಜ್ಯದ ಕಾಂಗ್ರೆಸ್ ಪಕ್ಷದ ದುರಾಡಳಿತದಿಂದ ಜನತೆ ಬೇಸತ್ತು ಹೋಗಿದ್ದು, ಈ ಬಾರಿ ಬಿಜೆಪಿ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಕ್ಷೇತ್ರದ ಜನತೆ ಬಿಜೆಪಿ ಪಕ್ಷವನ್ನು ಬೆಂಬಲಿಸುವಂತೆ ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ರಾಮಣ್ಣ ಚೌಡ್ಕಿ, ಎಪಿಎಂಪಿ ನಿರ್ದೇಶಕ ಬಸವರಾಜ್ ಈಶ್ವರಗೌಡರು, ತಾಲೂಕಾ ಪಂಚಾಯತ್ ಮಾಜಿ ಸದಸ್ಯ ರಮೇಶ ಚೌಡ್ಕಿ, ವಿರೂಪಾಕ್ಷಗೌಡರು,ಸೇರಿದಂತೆ ಪಕ್ಷದ ಮುಖಂಡರು,ಕಾರ್ಯಕರ್ತರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.

Related posts