You are here
Home > Election_2018 > ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ ೪೮ ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ

ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತದಾನದ ೪೮ ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯ

Koppal News : ಜಿಲ್ಲೆಯಲ್ಲಿ ಸದ್ಯ ಜರುಗುತ್ತಿರುವ ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಆ. ೩೧ ರಂದು ಮತದಾನ ನಡೆಯಲಿದೆ. ನಿಯಮಗಳನುಸಾರ ಮತದಾನ ಪ್ರಾರಂಭವಾಗುವ ೪೮ ಗಂಟೆ ಮುನ್ನ ಬಹಿರಂಗ ಪ್ರಚಾರ ಅಂತ್ಯಗೊಳಿಸುವಂತೆ ಜಿಲ್ಲಾ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ಎಲ್ಲ ಅಭ್ಯರ್ಥಿಗಳು ಹಾಗೂ ರಾಜಕೀಯ ಪಕ್ಷಗಳ ಮುಖಂಡರಿಗೆ ಸೂಚನೆ ನೀಡಿದ್ದಾರೆ.
ನಗರ ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದಂತೆ ಮತದಾನ ಪ್ರಕ್ರಿಯೆ ಆ. ೩೧ ರಂದು ನಡೆಯಲಿದೆ. ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾನ ಪ್ರಾರಂಭವಾಗುವ ೪೮ ಗಂಟೆ ಮುನ್ನ ಎಲ್ಲ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಮುಖಂಡರು ಬಹಿರಂಗ ಪ್ರಚಾರವನ್ನು ಅಂತ್ಯಗೊಳಿಸಬೇಕು. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್   ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Top