ನಗರ ಸ್ಥಳೀಯ ಸಂಸ್ಥೆ ಚುನಾವಣೆ : ಮತ ಎಣಿಕೆಗೆ ಸಕಲ ಸಜ್ಜು

Koppal News Election News  ಕೊಪ್ಪಳ ಜಿಲ್ಲೆಯ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮತಗಳ ಎಣಿಕೆ ಕಾರ್ಯ ಸೆ. 03 ರಂದು ಆಯಾ ತಾಲೂಕು ಕೇಂದ್ರಗಳಲ್ಲಿ ನಡೆಯಲಿದ್ದು, ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಕೊಪ್ಪಳ ಮತ್ತು ಗಂಗಾವತಿ ನಗರಸಭೆ, ಕುಷ್ಟಗಿ ಪುರಸಭೆ ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ಚುನಾವಣೆಗಾಗಿ ಆ. 31 ರಂದು ಮತದಾನ ಜರುಗಿದ್ದು, ಎಲ್ಲ 374 ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಹೀಗಾಗಿ ಎಲ್ಲರ ಚಿತ್ತ ಮತಗಳ ಎಣಿಕೆ ಕಾರ್ಯ ಸೆ. 03 ರ ಕಡೆಗೆ ಕೇಂದ್ರೀಕೃತವಾಗಿದೆ. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 04 ನಗರ ಸ್ಥಳೀಯ ಸಂಸ್ಥೆಗಳ 103 ಸದಸ್ಯ ಸ್ಥಾನಗಳಿಗಾಗಿ ಜರುಗಿದ ಚುನಾವಣೆಯಲ್ಲಿ 374 ಅಭ್ಯರ್ಥಿಗಳು ಕಣದಲ್ಲಿದ್ದರು. ಕೊಪ್ಪಳ ನಗರಸಭೆ- 31, ಗಂಗಾವತಿ ನಗರಸಭೆ- 35, ಕುಷ್ಟಗಿ ಪುರಸಭೆ- 23 ಸದಸ್ಯ ಸ್ಥಾನಗಳ ಪೈಕಿ 01 ಅವಿರೋಧ ಆಯ್ಕೆಯಾದ ಕಾರಣ 22 ಸದಸ್ಯರ ಆಯ್ಕೆ ಆಗಬೇಕಿದೆ. ಯಲಬುರ್ಗಾ ಪಟ್ಟಣ ಪಂಚಾಯತಿಗೆ 15 ಸದಸ್ಯರ ಆಯ್ಕೆ ಆಗಬೇಕಿದೆ.
ಸೆ. 03 ರಂದು ಬೆಳಿಗ್ಗೆ 08 ಗಂಟೆಗೆ ಮತಗಳ ಎಣಿಕೆ ಪ್ರಾರಂಭವಾಗಲಿದ್ದು, ಜಿಲ್ಲಾಡಳಿತ ಇದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಂಡಿದೆ. 04 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಮತಗಳ ಎಣಿಕೆಗಾಗಿ ಒಟ್ಟ 07 ಕೊಠಡಿಗಳನ್ನು ಸಿದ್ಧಪಡಿಸಲಾಗಿದ್ದು, 24 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ ಒಟ್ಟು 24 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ 04 ಜನ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. ಜಿಲ್ಲೆಯಲ್ಲಿ ಜರುಗಿದ ನಗರ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ 87904- ಪುರುಷ, 89415 ಮಹಿಳೆ ಸೇರಿದಂತೆ 177319 ಮತದಾರರ ಪೈಕಿ 60426- ಪುರುಷ, 60089- ಮಹಿಳೆ ಸೇರಿದಂತೆ ಒಟ್ಟು 120515 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಕೊಪ್ಪಳ ನಗರಸಭೆಗೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 02 ಕೊಠಡಿಗಳಲ್ಲಿ ನಡೆಯಲಿದ್ದು, ಪ್ರತಿ ಕೊಠಡಿಯಲ್ಲಿ 04 ಟೇಬಲ್‍ಗಳಂತೆ ಒಟ್ಟು 08 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ 08 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ 08 ಜನ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. ಒಟ್ಟು 61476 ಮತದಾರರ ಪೈಕಿ 20682-ಪುರುಷ, 20171- ಮಹಿಳೆ ಸೇರಿದಂತೆ ಒಟ್ಟು 40853 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.

ಗಂಗಾವತಿ ನಗರಸಭೆಗೆ ಸಂಬಂಧಿಸಿದಂತೆ ಮತಗಳ ಎಣಿಕೆ ಕಾರ್ಯ ನಗರದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನ (ಪ್ರೌಢಶಾಲೆ ವಿಭಾಗ) 02 ಕೊಠಡಿಗಳಲ್ಲಿ ನಡೆಯಲಿದ್ದು, ಪ್ರತಿ ಕೊಠಡಿಯಲ್ಲಿ 05 ಟೇಬಲ್‍ಗಳಂತೆ ಒಟ್ಟು 10 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ 10 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ 10 ಜನ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. ಇಲ್ಲಿನ 83796 ಒಟ್ಟು ಮತದಾರರ ಪೈಕಿ, 28083-ಪುರುಷ, 28581- ಮಹಿಳೆ ಸೇರಿದಂತೆ ಒಟ್ಟು 56664 ಮತದಾರರು ತಮ್ಮ ಸಾಂವಿಧಾನಿಕ ಹಕ್ಕು ಚಲಾಯಿಸಿದ್ದಾರೆ.

ಕುಷ್ಟಗಿ ಪುರಸಭೆಗೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 02 ಕೊಠಡಿಗಳಲ್ಲಿ ನಡೆಯಲಿದ್ದು, ಪ್ರತಿ ಕೊಠಡಿಯಲ್ಲಿ 02 ಟೇಬಲ್‍ಗಳಂತೆ ಒಟ್ಟು 04 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ 04 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ 04 ಜನ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. 20919 ಮತದಾರರ ಪೈಕಿ 7255-ಪುರುಷ, 7125- ಮಹಿಳೆ ಸೇರಿದಂತೆ ಒಟ್ಟು 14380 ಮತದಾರರು ಮತದಾನ ಮಾಡಿದ್ದಾರೆ.

ಯಲಬುರ್ಗಾ ಪಟ್ಟಣ ಪಂಚಾಯತಿಗೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯ ತಹಸಿಲ್ದಾರರ ಕಚೇರಿಯ 01 ಕೊಠಡಿಯಲ್ಲಿ ನಡೆಯಲಿದ್ದು, ಒಟ್ಟು 02 ಟೇಬಲ್‍ಗಳ ವ್ಯವಸ್ಥೆ ಮಾಡಲಾಗಿದೆ. ಮತ ಎಣಿಕೆ ಕಾರ್ಯಕ್ಕೆ 02 ಜನ ಮತ ಎಣಿಕೆ ಮೇಲ್ವಿಚಾರಕರು ಹಾಗೂ 02 ಜನ ಮತ ಎಣಿಕೆ ಸಹಾಯಕರನ್ನು ನೇಮಿಸಲಾಗಿದೆ. 11128 ಮತದಾರರ ಪೈಕಿ 4406- ಪುರುಷ, 4212- ಮಹಿಳೆ ಸೇರಿದಂತೆ ಒಟ್ಟು 8618 ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ ಎಂದು ಚುನಾವಣಾ ವಿಭಾಗದ ಪ್ರಕಟಣೆ ತಿಳಿಸಿದೆ.

Please follow and like us:
error