ಪೇಯ್ಡ್ ನ್ಯೂಸ್ ಬಗ್ಗೆ ದೈನಂದಿನ ವರದಿ ಕಣ್ಗಾವಲು

 ಚುನಾವಣಾ ಪ್ರಚಾರ ಸಂದರ್ಭದಲ್ಲಿ ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಪೇಯ್ಡ್ ನ್ಯೂಸ್ ಎಂಬುದು ಅತ್ಯಂತ ಕೆಟ್ಟ ಮಾದರಿಯಾಗಿದ್ದು, ಜಿಲ್ಲೆಯಲ್ಲಿ ಪ್ರಕಟಗೊಳ್ಳುವ ಪ್ರತಿಯೊಂದು ನಿಯತಕಾಲಿಕೆ, ದಿನಪತ್ರಿಕೆಗಳು, ಕೇಬಲ್ ಟಿ.ವಿ. ಹಾಗೂ ಟಿ.ವಿ. ಸುದ್ದಿವಾಹಿನಿಗಳ ಬಗ್ಗೆ ಆಯಾ ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಕಣ್ಗಾವಲು ಇರಿಸಬೇಕು. ಆಯಾ ಕ್ಷೇತ್ರ ಚುನಾವಣಾಧಿಕಾರಿಗಳ ಕಚೇರಿಯಿಂದ ಚುನಾವಣಾ ಆಯೋಗ ನಿಗದಿಪಡಿಸಿರುವ ನಿಗದಿತ ನಮೂನೆಯಲ್ಲಿ ಪ್ರತಿ ಅಭ್ಯರ್ಥಿವಾರು ವರದಿಯನ್ನು ನಿತ್ಯ ಬೆಳಿಗ್ಗೆ ೯ ಗಂಟೆಯ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಈ ವರದಿಯನ್ನು ಆಧರಿಸಿ, ಅಭ್ಯರ್ಥಿವಾರು ವೆಚ್ಚವನ್ನು ನಿಗದಿಪಡಿಸಿ, ಅಕೌಂಟಿಂಗ್ ಟೀಂ ಗೆ ಎಂಸಿಎಂಸಿ ಸಮಿತಿಯಿಂದ ವರದಿ ಸಲ್ಲಿಸಲಾಗುವುದು. ಶಂಕಾಸ್ಪದ ಪೇಯ್ಡ್‌ನ್ಯೂಸ್ ಕಂಡುಬಂದರೂ, ಸಂಬಂಧಪಟ್ಟ ಅಭ್ಯರ್ಥಿಗೆ ನೋಟೀಸ್ ಜಾರಿಗೊಳಿಸಬೇಕು. ೨೪ ಗಂಟೆಯ ಒಳಗಾಗಿ ಅಭ್ಯರ್ಥಿಯು ನೋಟೀಸ್‌ಗೆ ಉತ್ತರಿಸಬೇಕಾಗುತ್ತದೆ. ಪೇಯ್ಡ್‌ನ್ಯೂಸ್ ಬಗ್ಗೆ ಎಂಸಿಎಂಸಿ ಸಮಿತಿಯಿಂದ ಖಚಿತಪಟ್ಟಲ್ಲಿ, ಸಂಬಂಧಪಟ್ಟ ಮಾಧ್ಯಮದ ಮೇಲೆ ಕ್ರಮ ಕೈಗೊಳ್ಳಲು ರಾಜ್ಯ ಚುನಾವಣಾ ಆಯೋಗ ಮೂಲಕ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾಗೆ ವರದಿ ಸಲ್ಲಿಕೆಯಾಗಲಿದೆ ಎಂದರು.
ಅಕ್ರಮಗಳು ಕಂಡುಬಂದಲ್ಲಿ ಕಠಿಣ ಕ್ರಮ ಜರುಗಿಹಿಸಿ : ಚುನಾವಣಾ ನಾಮಪತ್ರ ಸಲ್ಲಿಕೆಯ ದಿನದಂದು ಚುನಾವಣಾ ಆಯೋಗ ನೀಡಿರುವ ನಿರ್ದೇಶನಗಳನ್ನು ಎಲ್ಲರೂ ತಪ್ಪದೆ ಪಾಲಿಸಬೇಕು. ನಾಮಪತ್ರ ಸಲ್ಲಿಕೆಯ ದಿನದಂದು ಕೈಗೊಳ್ಳುವ ಎಲ್ಲ ವೆಚ್ಚವನ್ನು ಅಭ್ಯರ್ಥಿಯ ವೆಚ್ಚಕ್ಕೆ ಸೇರಿಸಬೇಕು. ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಕೊಠಡಿಯೊಳಗೆ ನಿಗದಿತ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಯಾವುದೇ ವ್ಯಕ್ತಿಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಬೇಕು. ಸ್ವ-ಸಹಾಯ ಗುಂಪುಗಳು, ಸಂಘಗಳನ್ನು ರಾಜಕೀಯ ಉದ್ದೇಶಕ್ಕಾಗಿ ದುರ್ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳಿದ್ದು, ಅಧಿಕಾರಿಗಳು ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಬೇಕು. ಅಲ್ಲದೆ ವಿವಿಧ ಉದ್ದೇಶಗಳಿಗಾಗಿ ಟೋಕನ್ ನೀಡುವ ವ್ಯವಸ್ಥೆ ಮಾಡಿಕೊಳ್ಳುವ ಸಾಧ್ಯತೆಗಳಿದ್ದು, ಈ ಬಗ್ಗೆಯೂ ತೀವ್ರ ಎಚ್ಚರಿಕೆ ವಹಿಸಬೇಕು. ಜಿಲ್ಲೆಯ ಯಾವುದೇ ಪ್ರದೇಶದಲ್ಲಿ ಇಂತಹ ಅಕ್ರಮ ಚಟುವಟಿಕೆ ಕಂಡುಬಂದಲ್ಲಿ ಅಥವಾ ದೂರುಗಳು ಬಂದಲ್ಲಿ, ಅಧಿಕಾರಿಗಳು ಕೂಡಲೆ ಸ್ಥಳಕ್ಕೆ ಧಾವಿಸಿ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಹಿಂದೇಟು ಹಾಕಬಾರದು ಎಂದು ಜಿಲ್ಲಾಧಿಕಾರಿ ಎಂ. ಕನಗವಲ್ಲಿ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿರುವ ಪ್ರತಿ ತಂಡಗಳ ಅಧಿಕಾರಿ, ಸಿಬ್ಬಂದಿಗಳಿಗೆ ಕಾರ್ಯ ಚಟುವಟಿಕೆಗಳ ಕುರಿತು ಮಾಹಿತಿಯನ್ನು ಇದೇ ಸಂದರ್ಭದಲ್ಲಿ ನೀಡಲಾಯಿತು.
ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅನೂಪ್ ಶೆಟ್ಟಿ, ಅಪರ ಜಿಲ್ಲಾಧಿಕಾರಿ ಡಾ. ರುದ್ರೇಶ್ ಘಾಳಿ, ಕೊಪ್ಪಳ ಚುನಾವಣಾಧಿಕಾರಿ ಸಿ.ಡಿ. ಗೀತಾ, ಕುಷ್ಟಗಿ ಚುನಾವಣಾಧಿಕಾರಿ ಪ್ರಶಾಂತ್ ಪಿ.ಬಿ, ಕನಕಗಿರಿ ಚುನಾವಣಾಧಿಕಾರಿ ಎಚ್.ವಿ. ನಾಗರಾಜ್, ಗಂಗಾವತಿ ಚುನಾವಣಾಧಿಕಾರಿ ರವಿ ತಿರ್ಲಾಪುರ, ಯಲಬುರ್ಗಾ ಚುನಾವಣಾಧಿಕಾರಿ ವಿಜಯ ಮೆಕ್ಕಳಕಿ ಸೇರಿದಂತೆ ಚುನಾವಣಾ ವೆಚ್ಚ ನಿರ್ವಹಣೆ ತಂಡದ ಅಧಿಕಾರಿಗಳು, ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

Please follow and like us:
error