ಮಂಜುನಾಥ ಗೊಂಡಬಾಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ


ಕೊಪ್ಪಳ, ಎ. ೦೯: ಕೊಪ್ಪಳ ವಾಲ್ಮೀಕಿ ಸಮುದಾಯದ ಯುವ ಮುಖಂಡ, ಪಟ್ಟಣ ಪಂಚಾಯತ್ ಸದಸ್ಯ ಮಂಜುನಾಥ ಜಿ. ಗೊಂಡಬಾಳ ಕೊಪ್ಪಳ ವಿಧಾನಸಭಾ ಕ್ಷೇತ್ರದ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶ ಹೊರಡಿಸಲಾಗಿದೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಕೊಪ್ಪಳ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ನೆಕ್ಕಂಟಿ ಸೂರಿಬಾಬು, ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಅವರ ಶಿಫಾರಸ್ಸಿನ ಮೇರೆಗೆ ಕರ್ನಾಟಕ ಚುನಾವಣೆ ಪ್ರಚಾರ ಸಮಿತಿ ಅಧ್ಯಕ್ಷರಾಗಿರುವ ಸಚಿವ ಡಿ.ಕೆ. ಶಿವಕುಮಾರ ಆದೇಶ ಹೊರಡಿಸಿದ್ದು, ಕ್ಷೇತ್ರದ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುವಂತೆ ಸೂಚಿಸಿದ್ದಾರೆ.

Please follow and like us:
error