ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಿಂಚಿನ ನೊಂದಣಿ- ಸಿ.ಡಿ. ಗೀತಾ

: ಚುನಾವಣಾ ಆಯೋಗವು ವಯಸ್ಸು ೧೮ ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರಿಸಲು ಏ. ೧೪ ರವರೆಗೆ ಅವಕಾಶ ಕಲ್ಪಿಸಿದ್ದು, ’ಮಿಂಚಿನ ನೊಂದಣಿ’ ಕಾರ್ಯಕ್ರಮದಡಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಮತಗಟ್ಟೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಕೊಪ್ಪಳದ ಸಾಹಿತ್ಯ ಭವನದಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶದಂತೆ ಮಿಂಚಿನ ನೊಂದಣಿ ಕಾರ್ಯಕ್ರಮದಡಿ ಏ. ೧೪ ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಬೇಕು. ಅಂತಹ ಅರ್ಜಿಗಳ ಬಗ್ಗೆ ಭೌತಿಕವಾಗಿ ಪರಿಶೀಲಿಸಿ, ಯಾವುದೇ ಕಾರಣಕ್ಕೂ ಅರ್ಹ ಮತದಾರರು, ಮತದಾನದ ಹಕ್ಕಿನಿಂದ ವಂಚಿತರರನ್ನಾಗಿ ಮಾಡದೇ ಮತದಾರರ ಪಟ್ಟಿಯಲ್ಲಿ ನೊಂದಣಿಗೆ ತ್ವರಿತವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಗುರುಬಸವರಾಜ ಸೇರಿದಂತೆ ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮಿಂಚಿನ ನೊಂದಣಿ- ಸಿ.ಡಿ. ಗೀತಾ
ಕೊಪ್ಪಳ ಏ. ೦೪ (ಕರ್ನಾಟಕ ವಾರ್ತೆ): ಚುನಾವಣಾ ಆಯೋಗವು ವಯಸ್ಸು ೧೮ ವರ್ಷ ತುಂಬಿದವರನ್ನು ಮತದಾರರ ಪಟ್ಟಿಗೆ ಸೇರಿಸಲು ಏ. ೧೪ ರವರೆಗೆ ಅವಕಾಶ ಕಲ್ಪಿಸಿದ್ದು, ’ಮಿಂಚಿನ ನೊಂದಣಿ’ ಕಾರ್ಯಕ್ರಮದಡಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರಿಸಲು ಕ್ರಮ ವಹಿಸಬೇಕು ಎಂದು ಕೊಪ್ಪಳ ವಿಧಾನಸಭಾ ಕ್ಷೇತ್ರ ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಮತಗಟ್ಟೆ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಕೊಪ್ಪಳದ ಸಾಹಿತ್ಯ ಭವನದಲ್ಲಿ ವಿಧಾನಸಭಾ ಕ್ಷೇತ್ರದ ಎಲ್ಲ ಬೂತ್ ಮಟ್ಟದ ಅಧಿಕಾರಿಗಳೊಂದಿಗೆ ಏರ್ಪಡಿಸಿದ ಸಭೆಯಲ್ಲಿ ಈ ಸೂಚನೆ ನೀಡಿದರು.
ಭಾರತ ಚುನಾವಣಾ ಆಯೋಗದ ನಿರ್ದೇಶದಂತೆ ಮಿಂಚಿನ ನೊಂದಣಿ ಕಾರ್ಯಕ್ರಮದಡಿ ಏ. ೧೪ ರವರೆಗೆ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಹಕ್ಕು ಮತ್ತು ಆಕ್ಷೇಪಣೆ ಅರ್ಜಿಗಳನ್ನು ಸ್ವೀಕರಿಸಬೇಕು. ಅಂತಹ ಅರ್ಜಿಗಳ ಬಗ್ಗೆ ಭೌತಿಕವಾಗಿ ಪರಿಶೀಲಿಸಿ, ಯಾವುದೇ ಕಾರಣಕ್ಕೂ ಅರ್ಹ ಮತದಾರರು, ಮತದಾನದ ಹಕ್ಕಿನಿಂದ ವಂಚಿತರರನ್ನಾಗಿ ಮಾಡದೇ ಮತದಾರರ ಪಟ್ಟಿಯಲ್ಲಿ ನೊಂದಣಿಗೆ ತ್ವರಿತವಾಗಿ ಅಗತ್ಯ ಕ್ರಮವಹಿಸಬೇಕು ಎಂದು ಚುನಾವಣಾಧಿಕಾರಿ ಸಿ.ಡಿ. ಗೀತಾ ಅವರು ಸೂಚನೆ ನೀಡಿದರು.
ಸಭೆಯಲ್ಲಿ ಸಹಾಯಕ ಚುನಾವಣಾಧಿಕಾರಿ ಗುರುಬಸವರಾಜ ಸೇರಿದಂತೆ ಹೋಬಳಿಗಳ ಕಂದಾಯ ನಿರೀಕ್ಷಕರು, ಗ್ರಾಮ ಲೆಕ್ಕಾಧಿಕಾರಿಗಳು, ಬೂತ್ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

Please follow and like us:
error