ಮತದಾರ ಕಾರ್ಮಿಕರಿಗೆ ಏಪ್ರಿಲ್. 23ರಂದು ವೇತನ ಸಹಿತ ರಜೆ ಘೋಷಣೆ

ಕೊಪ್ಪಳ ಏ. 18  ):  ಲೋಕಸಭಾ ಸಾರ್ವತ್ರಿಕ ಚುನಾವಣೆ-2019ರ ನಿಮಿತ್ತ ಕೊಪ್ಪಳ ಲೋಕಸಭಾ ಕ್ಷೆÃತ್ರಕ್ಕೆ ಏಪ್ರಿಲ್. 23ರಂದು ಚುನಾವಣೆ ನಡೆಯಲಿದ್ದು, ಮತದಾರ ಕಾರ್ಮಿಕರಿಗೆಲ್ಲರಿಗು ಮತದಾನದಿನದಂದು (ಏಪ್ರಿಲ್. 23ರಂದು) ವೇತನ ಸಹಿತ ರಜೆಯನ್ನು ಘೋಷಿಸಲಾಗಿದೆ ಎಂದು ಕೊಪ್ಪಳ ಕಾರ್ಮಿಕ ಇಲಾಖೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ತಿಳಿಸಿದ್ದಾರೆ.
  ಭಾರತ ಚುನಾವಣಾ ಆಯೋಗವು, ಏಪ್ರಿಲ್. 23ರಂದು ಕೊಪ್ಪಳ ಲೋಕಸಭಾ ಕ್ಷೆÃತ್ರಕ್ಕೆ ಮತದಾನ ನಿಗದಿ ಪಡಿಸಿದ್ದು, ಮತದಾನ ನಡೆಯಲಿರುವ ಕೊಪ್ಪಳ ಲೋಕಸಭಾ ಕ್ಷೆÃತ್ರ ವ್ಯಾಪ್ತಿಯಲ್ಲಿ ನೋಂದಾಯಿತರಾದ ಸಂಬಂಧಪಟ್ಟ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಪ್ರಜಾ ಪ್ರತಿನಿಧಿ ಕಾಯ್ದೆ, ಸೆಕ್ಷನ್ 135(ಬಿ) ರಡಿಯಲ್ಲಿ ವೇತನ ಸಹಿತ ರಜೆ ಘೋಷಿಸಿ ಸಂವಿಧಾನಾತ್ಮಕ ಹಕ್ಕಾದ ಮತವನ್ನು ಚಲಾಯಿಸುವುದಕ್ಕಾಗಿ ಎಲ್ಲಾ ಸಂಸ್ಥೆ/ ನಿಯೋಜಕರು ಅವಕಾಶ ಮಾಡಿ ಕೊಡಬೇಕಾಗಿದೆ.  ಆದ್ದರಿಂದ ಏಪ್ರಿಲ್. 23ರಂದು ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಎಲ್ಲಾ ಸಂಸ್ಥೆಗಳಲ್ಲಿ ಕೆಲಸ ಮಾಡುವ ಅರ್ಹ ಮತದಾರರಾಗಿರುವ ಎಲ್ಲಾ ಕಾರ್ಮಿಕರಿಗೆ ಮತ ಚಲಾಯಿಸಲು ಅನುಕೂಲವಾಗುವಂತೆ ಮತದಾನದಿನವಾದ ಏಪ್ರಿಲ್. 23ರ ಮಂಗಳವಾರದಂದು ವೇತನ ಸಹಿತ ರಜೆ ನೀಡಿ, ಎಲ್ಲಾ ಅರ್ಹ ಕಾರ್ಮಿಕರು ಸಂವಿಧಾನಾತ್ಮಕ/ ಶಾಸನಾತ್ಮಕ ಹಕ್ಕಾದ ಮತವನ್ನು ಕಾನೂನಿನ್ವಯ ಚಲಾಯಿಸಲು ಅನುವು ಮಾಡಿಕೊಡಲು ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ.
  ಈ ವಿಷಯದಲ್ಲಿ ಕಾರ್ಮಿಕರಿಗೆ ಸಂವಿಧಾನಾತ್ಮಕ ಹಕ್ಕಾದ ಮತ ಚಲಾವಣೆಗಾಗಿ ಮತದಾನದಿನದಂದು ರಜೆ ನೀಡದೆ ಮತದಾನಕ್ಕೆ ಅವಕಾಶ ಮಾಡಿಕೊಡದಿದ್ದಲ್ಲಿ ಅಂತಹ ಅಂಗಡಿಗಳು, ವಾಣಿಜ್ಯ ಸಂಸ್ಥೆಗಳು, ಕಾರ್ಖಾನೆಗಳು ಮತ್ತು ಇತರೆ ಸಂಸ್ಥೆಗಳ ವಿರುದ್ಧ 1963ರ ಕರ್ನಾಟಕ ಔದ್ಯೊÃಗಿಕ ಸಂಸ್ಥೆಗಳ (ರಾಷ್ಟಿçÃಯ ಹಾಗೂ ಹಬ್ಬದ ರಜಾದಿನಗಳು) ಕಾಯ್ದೆಯ ಕಲಂ 3-ಎ ಹಾಗೂ 1951ರ ಪ್ರಜಾ ಪ್ರತಿನಿಧಿ ಕಾಯ್ದೆ ಕಲಂ 135 ರ(ಬಿ) ಉಲ್ಲಂಘನೆಗಾಗಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು ಎಂದು ಕೊಪ್ಪಳ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ
Please follow and like us:
error