ವಿವಿಧ ಪಕ್ಷ ತೊರೆದು ಬಿಜೆಪಿ ಸೇರ್ಪಡೆ

ಕೊಪ್ಪಳ: 
ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಕಾರ್ಯ ಮತ್ತು ಪಕ್ಷದ ತತ್ವ ಸಿದ್ದಾಂತಕ್ಕೆ ಬದ್ಧರಾಗಿ ಹಾಗೂ ಸಂಸದ ಸಂಗಣ್ಣ ಕರಡಿರವರ ಅಭಿವೃದ್ಧಿ ಕಾರ್ಯಗಳನ್ನು ಮೆಚ್ಚಿ ಬಿಜೆಪಿ ಸೇರ್ಪಡೆಗೊಂಡರು.
ನಗರದ ೧೮ನ ವಾರ್ಡಿನ ತೆಗ್ಗಿನಕೆರೆ ಮತ್ತು ಬಾಹರ್ ಪೇಟೆಯಲ್ಲಿ ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ಶನಿವಾರ ಗುರು-ಹಿರಿಯರೊಂದಿಗೆ ಸಮಾಲೋಚಿಸಿ, ಆಶೀರ್ವಾದ ಪಡೆದು ಮಾತನಾಡಿದ ಅವರು, ಜಿಲ್ಲೆಯಲ್ಲಿ ನಮ್ಮ ತಂದೆಯವರ ಆಡಳಿತವಧಿಯಲ್ಲಿ ಕೈಗೊಂಡ ಅಭಿವೃದ್ಧಿ ಕಾರ್ಯಗಳೇ ನನಗೆ ಶ್ರೀರಕ್ಷೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಸಾಕಷ್ಟು ಅನುದಾನ ಬಿಡುಗಡೆಗೊಳಿಸಿದ್ದಾರೆ. ಕಾಂಗ್ರೆಸ್ ಅಭಿವೃದ್ಧಿ ನೆಪದಲ್ಲಿ ಕಾಲಹರಣ ಮಾಡಿದೆ. ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಎಂದು ಮತದಾರರಲ್ಲಿ ಮನವಿ ಮಾಡಿದರು.
೧೮ನೇ ವಾರ್ಡಿನ ವಿವಿಧ ಪಕ್ಷಗಳ ಮುಖಂಡರು, ಕಾರ್ಯಕರ್ತರು ಬಿಜೆಪಿ ಅಭ್ಯರ್ಥಿ ಅಮರೇಶ ಕರಡಿ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು.

Please follow and like us:
error