ಸಾರ್ವತ್ರಿಕ ಚುನಾವಣೆ : ವಸತಿ ನಿಲಯಗಳಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಕೊಪ್ಪಳ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಸತಿ ನಿಲಯಗಳ ವಿಧ್ಯಾರ್ಥಿಗಳಿಗಾಗಿ ಮತದಾರರ ಜಾಗೃತಿ ಕುರಿತ ಸ್ವೀಪ್ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸ್ವೀಪ್ ಕಾರ್ಯಕ್ರಮಗಳನ್ನು ಕೊಪ್ಪಳ ಮತ್ತು ಯಲಬುರ್ಗಾ ತಾಲೂಕಿನ ವಸತಿ ನಿಲಯಗಳಲ್ಲಿ ಏರ್ಪಡಿಸಲಾಯಿತು. ಕಾರ್ಯಕ್ರಮಗಳಲ್ಲಿ ವಸತಿ ನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ಸಂಬಂಧಿಸಿದ ತಾಲೂಕ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ ಕುರಿತು ತಿಳುವಳಿಕೆ ನೀಡಿ ಕಡ್ಡಾಯ ಮತದಾನದ ಪ್ರತಿಜ್ಞಾ ವಿಧಿಯನ್ನು ಭೋಧಿಸಿದರು. ಕಾರ್ಯಕ್ರಮವನ್ನು ಕೊಪ್ಪಳ ತಾಲೂಕಿನ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಮತ್ತು ಯಲಬುರ್ಗಾ ತಾಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಆಯೋಜಿಸಲಾಗಿದ್ದು, ಮತದಾನ ಜಾಗೃತಿ ಕುರಿತು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಹಾಗೂ ಮತದಾನದ ಪ್ರಾಮುಖ್ಯತೆ ಕುರಿತು ತಿಳಿಸಿ, ತಮ್ಮ ಮೂಲಕ ಉಳಿದ ನಾಗರೀಕರಿಗೆ ಮತದಾನದ ಪ್ರಾಮುಖ್ಯತೆ ಕುರಿತು ವಿವರಿಸುವಂತೆ ವಿದ್ಯಾರ್ಥಿಗಳಿಗೆ ತಿಳಿಸಲಾಯಿತು.

ಮತದಾನದ ಅರಿವು ಮತ್ತು ಮಹತ್ವ : ಹೂವಿನಾಳ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ
ಕೊಪ್ಪಳ   ಕೊಪ್ಪಳ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಮತ್ತು ಆರೋಗ್ಯ ಸಹಾಯಕಿಯರಿಗೆ ಮತದಾನದ ಅರಿವು ಮತ್ತು ಮಹತ್ವದ ಕುರಿತು ಹೂವಿನಾಳ ಗ್ರಾಮದಲ್ಲಿ ಜಾಗೃತಿ ಕಾರ್ಯಕ್ರಮ ನಡೆಯಿತು.
ಕೊಪ್ಪಳ ಜಿಲ್ಲೆಯ ಹೂವಿನಾಳ ಗ್ರಾಮದಲ್ಲಿ ನಡೆದ ಪ್ರಾಥಮಿಕ ಆರೋಗ್ಯ ಆರೈಕೆಯ ಅಡಿಯಲ್ಲಿ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಮತ್ತು ಆರೋಗ್ಯ ಸಹಾಯಕಿಯರಿಗೆ ಅಸಾಂಕ್ರಾಮಿಕ ರೋಗಗಳ ಕುರಿತು ತರಬೇತಿಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಜೊತೆ-ಜೊತೆಯಲ್ಲಿಯೇ ಮತದಾನದ ಅರಿವು ಮತ್ತು ಮಹತ್ವ ಕುರಿತು ತಿಳುವಳಿಕೆ ನೀಡಲು ಸ್ವೀಪ್ ಕಾರ್ಯಕ್ರಮದ ಬಗ್ಗೆ ಚರ್ಚಿಸಲಾಯಿತು. ಹಾಗೂ ಚುನಾವಣೆಯ ಸಂದರ್ಭದಲ್ಲಿ ಮತದಾನದ ಬಗ್ಗೆ ಅರಿವು, ಅದರ ಮಹತ್ವ ಮತ್ತು ನಮ್ಮ ಮೂಲಭೂತ ಹಕ್ಕು. ಮತದಾನ ಮಾಡುವುದು ಪ್ರಜಾಪ್ರಭುತ್ವದಲ್ಲಿ ಪ್ರತಿಯೊಬ್ಬ ನಾಗರಿಕನ ಹಕ್ಕಾಗಿದೆ ಎಂಬುವುದರ ಬಗ್ಗೆ ಆಶಾ ಕಾರ್ಯಕರ್ತೆಯರು, ಶುಶ್ರೂಷಕಿಯರು, ಮತ್ತು ಆರೋಗ್ಯ ಸಹಾಯಕಿಯರಿಗೆ ಜಾಗೃತಿ ಮೂಡಿಸಲಾಯಿತು.
ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಮತದಾನ ಜಾಗೃತಿ
ಕೊಪ್ಪಳ   ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕೊಪ್ಪಳದಲ್ಲಿ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ಮೂಡಿಸಲಾಯಿತು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ಮತದಾರರ ಜಾಗೃತಿ ಮೂಡಿಸುವ ಕಾರ್ಯಕ್ರಮ ಆಯೋಜಿಸಲಾಯಿತು. ನೈತಿಕ ಮತದಾನ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ, ಚುನಾವಣೆಯ ದಿನದಂದು ತಪ್ಪದೇ ಮತ ಚಲಾಯಿಸಲು ಮತದಾನವು ನಮ್ಮ ಹಕ್ಕು ನಮ್ಮ ಪ್ರಜಾಸತ್ತಾತ್ಮಕ ಸಂಪ್ರದಾಯಗಳು ಮುಕ್ತ, ನ್ಯಾಯ ಸಮ್ಮತ ಮತ್ತು ಶಾಂತಿಯುತ ಚುನಾವಣಾ ಘನತೆಯನ್ನು ಎತ್ತಿ ಹಿಡಿಯುತ್ತೇವೆ ಎಂಬುದಾಗಿ ಪ್ರಮಾಣ ಸ್ವೀಕರಿಸಲಾಯಿತು. ಹಾಸ್ಟೆಲ್ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು, ಮತದಾರರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.

Please follow and like us:
error