ಕೊಪ್ಪಳ ಗ್ರಾಮ ಪಂಚಾಯಿತಿ ಚುನಾವಣೆ : 1212 ಸ್ಥಾನಗಳಿಗೆ ಚುನಾವಣೆ : ಕಣದಲ್ಲಿ 3,341 ಅಭ್ಯರ್ಥಿಗಳು

109 ಅಭ್ಯರ್ಥಿಗಳು ಅವಿರೋಧ ಆಯ್ಕೆ ಮೊದಲ ಹಂತದ ಚುನಾವಣೆ :  ಗ್ರಾಮ ಪಂಚಾಯಿತಿ
ಕೊಪ್ಪಳ,  : ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಅಂಗವಾಗಿ ಕೊಪ್ಪಳ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ನಡೆಯುವ ಚುನಾವಣೆಗಾಗಿ ನಾಮಪತ್ರ ಸಲ್ಲಿಕೆಯೂ ಮುಕ್ತಾಯಗೊಂಡಿದ್ದು, ಮೂರು ತಾಲ್ಲೂಕುಗಳ 73 ಗ್ರಾಮ ಪಂಚಾಯಿತಿಗಳಲ್ಲಿನ ಒಟ್ಟು 1,321 ಸ್ಥಾನಗಳಲ್ಲಿ 109 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.  ಉಳಿದ 1,212 ಸ್ಥಾನಗಳಿಗಾಗಿ 3,341 ಅಭ್ಯರ್ಥಿಗಳು ಅಂತಿಮವಾಗಿ ಕಣದಲ್ಲಿದ್ದಾರೆ.
ಇದೇ ಡಿಸೆಂಬರ್. 22ಕ್ಕೆ ನಡೆಯುವ ಮೊದಲ ಹಂತದ ಚುನಾವಣೆಗೆ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ 38 ಗ್ರಾಮ ಪಂಚಾಯಿತಿಗಳಲ್ಲಿನ 736 ಸ್ಥಾನಗಳಿಗೆ 1,967 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇದರಲ್ಲಿ 52 ಜನರ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಉಳಿದ 684 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಯಲಬುರ್ಗಾ ತಾಲ್ಲೂಕಿನ 20 ಗ್ರಾಮ ಪಂಚಾಯಿತಿಗಳಲ್ಲಿನ 345 ಸ್ಥಾನಗಳಿಗೆ 818 ಅಭ್ಯರ್ಥಿಗಳಲ್ಲಿ 40 ಅಭ್ಯರ್ಥಿಗಳು ಅವಿರೋಧ ಆಯ್ಕೆ ಆಗಿದ್ದಾರೆ. ಇದರಿಂದಾಗಿ 305 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.  ಕುಕನೂರು ತಾಲ್ಲೂಕಿನ 15 ಗ್ರಾಮ ಪಂಚಾಯಿತಿಗಳಲ್ಲಿನ 240 ಸ್ಥಾನಗಳಲ್ಲಿ 17 ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದು, ಇದರಿಂದಾಗಿ ಉಳಿದ 223 ಸ್ಥಾನಗಳಿಗೆ ಮಾತ್ರ ಚುನಾವಣೆ ನಡೆಯಲಿದೆ.
2ನೇ ಹಂತಕ್ಕೆ 343 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ;
ಎರಡನೇ ಹಂತದ ಚುನಾವಣೆ ನಡೆಯಲಿರುವ ಜಿಲ್ಲೆಯ ಗಂಗಾವತಿ, ಕಾರಟಗಿ, ಕನಕಗಿರಿ ಹಾಗೂ ಕುಷ್ಟಗಿ ತಾಲ್ಲೂಕುಗಳಲ್ಲಿನ 76 ಗ್ರಾಮ ಪಂಚಾಯಿತಿಗಳಲ್ಲಿನ 1,375 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಈವರೆಗೆ 343 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಈ ಪೈಕಿ ಗಂಗಾವತಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿನ 347 ಸ್ಥಾನಗಳಿಗೆ 115 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.  ಕಾರಟಗಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 207 ಸ್ಥಾನಗಳಿಗೆ 33 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕನಕಗಿರಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 196 ಸ್ಥಾನಗಳಿಗೆ 33 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕುಷ್ಟಗಿ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಲ್ಲಿನ 625 ಸ್ಥಾನಗಳಿಗೆ 162 ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆಯಾಗಿದ್ದು, 2ನೇ ಹಂತದ ಗ್ರಾ.ಪಂ. ಚುನಾವಣೆಯಲ್ಲಿ ಈವರೆಗೆ ಒಟ್ಟು 343 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಡಿಸೆಂಬರ್. 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ  ತಿಳಿಸಿದ್ದಾರೆ.

Please follow and like us:
error