ಗ್ರಾ.ಪಂ. ಚುನಾವಣೆ ಪ್ರಚಾರದಲ್ಲಿ ನಿಯಮ ಅನುಸರಿಸಿ : ವಿಕಾಸ್ ಕಿಶೋರ್ ಸುರಳ್ಕರ್

ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆ-2020ರ ಅಂಗವಾಗಿ ಮೊದಲ ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಅಂತಿಮ ಕಣದಲ್ಲಿರುವ ಅಭ್ಯರ್ಥಿಗಳು ಚುನಾವಣಾ ಪ್ರಚಾರದ ವೇಳೆ ಕೋವಿಡ್-19 ಮಾರ್ಗಸೂಚಿ ಹಾಗೂ ಆಯೋಗದ ನಿಯಮವನ್ನು ಅನುಸರಿಸುವಂತೆ ಜಿಲ್ಲಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ಅವರು ಸೂಚನೆ ನೀಡಿದ್ದಾರೆ.
ಗ್ರಾಮ ಪಂಚಾಯತಿ ಚುನಾವಣೆಯು ಪಕ್ಷ ರಹಿತ ಚುನಾವಣೆಯಾಗಿರುವುದರಿಂದ ಅಭ್ಯರ್ಥಿಯ ಪ್ರಚಾರ ಕ್ಷೇತ್ರ ವ್ಯಾಪ್ತಿಯು ಚಿಕ್ಕದಾಗಿರುವುದರಿಂದ ಗರಿಷ್ಟ 5 ಜನ ಬೆಂಬಲಿಗರೊAದಿಗೆ ಸಾಮಾಜಿಕ ಅಂತರ ಕಾಯ್ದುಕೊಂಡು, ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸಿ ಆದಷ್ಟು ಎಲೆಕ್ಟಾçನಿಕ್ ಮೀಡಿಯಾದಲ್ಲಿ ಪ್ರಚಾರ ಮಾಡಿ.
ಕೋವಿಡ್-19 ಹಿನ್ನಲೆ ಅಭ್ಯರ್ಥಿಗಳು ಪ್ರಚಾರದ ನಿಯಮಾನುಸಾರ ಮುದ್ರಿಸಿದ ಕರಪತ್ರಗಳನ್ನು ಹಂಚಬಹುದು, ಹಂಚುವಾಗ ಕಡ್ಡಾಯವಾಗಿ ಮಾಸ್ಕ್, ಗ್ಲೌಸ್ ಧರಿಸಬೇಕು, ಸ್ಯಾನಿಟೈಜರ್ ಉಪಯೋಗಿಸಬೇಕು ಹಾಗೂ ಗುಂಪು ಪ್ರಚಾರ ಮಾಡುವಂತಿಲ್ಲ. ಕೋವಿಡ್ ಪಾಸಿಟಿವ್ ಇರುವ ಅಭ್ಯರ್ಥಿಗಳು ಎಲೆಕ್ಟಾçನಿಕ್ ಮಾಧ್ಯಮದ ಮೂಲಕ ಪ್ರಚಾರ ಮಾಡಲು ಅವಕಾಶವಿದೆ. ಸಭೆ ಸಮಾರಂಭವನ್ನು ಸಂಬAಧಪಟ್ಟ ಚುನಾವಣಾಧಿಕಾರಿಗಳಿಂದ ಪರವಾನಿಗೆ ಪಡೆದು ಕೋವಿಡ್ ಮಾರ್ಗಸೂಚಿ ಅನುಸಾರ ನಡೆಸಬೇಕು.
ರಾಜಕೀಯ ಹಸ್ತಕ್ಷೇಪ ತಡೆಗೆ ಸೂಚನೆ;
ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳು ಸಭೆ ಸಮಾರಂಭಗಳನ್ನು ಏರ್ಪಡಿಸಿ ವೇದಿಕೆಯ ಮೇಲೆ ಪಕ್ಷದ ಬಾವುಟ ಬ್ಯಾನರ್‌ಗಳನ್ನು ಬಳಸುವಂತಿಲ್ಲ. ಸ್ಪರ್ಧಿಸುವ ಅಭ್ಯರ್ಥಿ ತಮ್ಮ ಪಕ್ಷ, ಬೆಂಬಲಿತ ಅಭ್ಯರ್ಥಿ ಎಂದು ಪರಿಚಯಿಸಬಾರದು. ಹಾಗೂ ಅವರ ಪರವಾಗಿ ಮತ ನೀಡಲು ಮತದಾರರನ್ನು ಕೋರುವಂತಿಲ್ಲ. ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ರಾಜಕೀಯ ಪಕ್ಷಗಳ ಚಿಹ್ನೆ ಇರುವ ಕರಪತ್ರ, ಬ್ಯಾನರ್, ಕಟೌಟ್ ಮೂಲಕ ಪ್ರಚಾರ ಮಾಡುವಂತಿಲ್ಲ. ರಾಜಕೀಯ ಮುಖಂಡರ ಭಾವಚಿತ್ರ ಅಥವಾ ಪಕ್ಷಗಳ ಚಿಹ್ನೆ ಬಳಸಿ ಜಾಹೀರಾತು ನೀಡುವಂತಿಲ್ಲ. ನಿಯಮ ಉಲ್ಲಂಘಿಸಿದ್ದಲ್ಲಿ ಚುನಾವಣಾ ಪ್ರಚಾರ ಸಾಮಾಗ್ರಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುಲಾಗುವುದು ಹಾಗೂ ಅಂತವರ ವಿರುದ್ಧ ಕಾನೂನು ರೀತ್ಯಾ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Please follow and like us:
error