ಚುನಾವಣೆ ಸಣ್ಣ ಸೂಚನೆಗಳನ್ನೂ ಕಟ್ಟುನಿಟ್ಟಾಗಿ ಪಾಲಿಸಿ: ವಿಕಾಸ್ ಕಿಶೋರ್ ಸುರಳ್ಕರ್


ಕೊಪ್ಪಳ,  ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆ-2020 ರಲ್ಲಿ ಚುನಾವಣೆ ಕರ್ತವ್ಯಕ್ಕೆ ನೇಮಕ ಮಾಡಿರುವ ಎಲ್ಲ ಸಿಬ್ಬಂದಿಗಳೂ ಅನುಭವಿಗಳಿದ್ದು, ಅತಿಯಾದ ಆತ್ಮವಿಶ್ವಾಸದಿಂದ ಸಣ್ಣ ಸೂಚನೆಗಳನ್ನು ಅಲಕ್ಷಿಸದೆ, ಕಟ್ಟುನಿಟ್ಟಾಗಿ ಪಾಲಿಸಿ ಎಂದು ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳಾದ ವಿಕಾಸ್ ಕಿಶೋರ್ ಸುರಳ್ಕರ್ ಅವರು ಹೇಳಿದರು.
ಜಿಲ್ಲಾ ಆಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಗುರುವಾರದಂದು ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಮತಕ್ಷೇತ್ರದಿಂದ ಚುನಾವಣೆ-2020 ರ ಅಂಗವಾಗಿ ಪ್ರಿಸೈಡಿಂಗ್ ಅಧಿಕಾರಿಗಳಿಗೆ ಮತ್ತು ಪೋಲಿಂಗ್ ಅಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ವಿಧಾನ ಪರಿಷತ್ ಚುನಾವಣೆ ಇತರೆ ಚುನಾವಣೆಗಳಿಗಿಂತ ಭಿನ್ನವಾಗಿದ್ದು, ಈ ಚುನಾವಣೆಯಲ್ಲಿ ಮತಪೆಟ್ಟಿಗೆ, ಮತಪತ್ರಗಳನ್ನು ಬಳಸಲಾಗುತ್ತದೆ. ಮತದಾರರ ಸಂಖ್ಯೆ ಕಡಿಮೆ ಇರುವುದರಿಂದ ಹೆಚ್ಚಿನ ಆತಂಕ ಪಡುವ ಅಗತ್ಯವಿಲ್ಲ. ಆದರೆ ಚುನಾವಣಾ ಆಯೋಗದಿಂದ ನೀಡಲಾಗುವ ಪ್ರತಿ ಸಣ್ಣ ಸೂಚನೆಯನ್ನೂ ಕಟ್ಟುನಿಟ್ಟಾಗಿ ಪಾಲಿಸಬೇಕು. ಬಹಳಷ್ಟು ಅನುಭವಿಗಳು ಚುನಾವಣಾ ಕರ್ತವ್ಯಕ್ಕೆ ನೇಮಕವಾಗಿದ್ದೀರಿ, ಅನುಭವದ ಆಧಾರದಲ್ಲಿ ಅತಿಯಾದ ಆತ್ಮವಿಶ್ವಾಸದಿಂದ ಯಾವುದೇ ಸೂಚನೆಯನ್ನು ಕಡೆಗಣಿಸಬೇಡಿ. ಚುನಾವಣಾ ಸಂಬAಧಿ ಎಲ್ಲ ಸಾಮಗ್ರಿಗಳನ್ನು ಮತಗಟ್ಟೆ ಅಧಿಕಾರಿಗಳು ಪರಿಶೀಲಿಸಿ ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗಬೇಕು. ಪಿಆರ್‌ಓ ಗಳು ನೀಡಲಾದ ದಿನಚರಿ(ಡೈರಿ)ಯನ್ನು ನಿರ್ವಹಿಸಬೇಕು. ಮತದಾನ ಸಂದರ್ಭದಲ್ಲಿ ನೈಜ ಮತದಾರರ ಗುರುತಿಸುವಿಕೆ ಮುಖ್ಯವಾಗಿದ್ದು, ಈ ವಿಷಯವಾಗಿ ಜಾಗರೂಕರಾಗಿರಬೇಕು. ಪ್ರಸ್ತುತ ಕೋವಿಡ್ ಇರುವುದರಿಂದ ಮತಗಟ್ಟೆಗಳ ಸ್ವಚ್ಛತೆ, ಸ್ಯಾನಿಟೈಜೇಷನ್ ಮುಂತಾದ ಎಲ್ಲಾ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳುತ್ತದೆ. ಆದಾಗ್ಯೂ ಕೋವಿಡ್‌ಗೆ ಸಂಬAಧಿಸಿದAತೆ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಯಾವುದಾದರೂ ಕ್ರಮ ಕೈಗೊಳ್ಳಬೇಕಾದಲ್ಲಿ ಮತಗಟ್ಟೆ ಅಧಿಕಾರಿ ಸ್ಥಳದಲ್ಲಿಯೇ ಕ್ರಮ ಕೈಗೊಳ್ಳಬಹುದು. ತರಬೇತಿಯಲ್ಲಿ ನೀಡಲಾಗುವ ಎಲ್ಲ ಸೂಚನೆಗಳನ್ನು ಗಮನವಿಟ್ಟು ಕೇಳಿ, ಅನುಮಾನಗಳನ್ನು ಪರಿಹರಿಸಿಕೊಳ್ಳಿ ಎಂದು ಅವರು ಹೇಳಿದರು.
ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಮಾತನಾಡಿ, ಈಶಾನ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಎಲ್ಲಾ ಮತದಾರರು ಶಿಕ್ಷಿತರು ಹಾಗೂ ಪದವೀಧರರಿದ್ದು, ಗೊಂದಲಗಳು ಉಂಟಾಗುವ ಸಾಧ್ಯತೆ ಕಡಿಮೆ. ಜಿಲ್ಲೆಯಾದ್ಯಂತ 20 ಮತಗಟ್ಟೆಗಳಿವೆ. ವಿಕಲಚೇತನರು, ಕೋವಿಡ್ ಸೋಂಕಿತರು, ಶಂಕಿತರಿಗೆ ಈಗಾಗಲೇ ಅಂಚೆ ಮತಪತ್ರವನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ. ಮತಗಟ್ಟೆಗಳಲ್ಲಿ ರಾಜಕೀಯ ಪಕ್ಷಗಳ ಏಜೆಂಟರು, ಮತದಾರರ ಗುರುತಿನ ದಾಖಲೆಗಳನ್ನು ಪರಿಶೀಲಿಸಿ. ಚುನಾವಣಾ ಕರ್ತವ್ಯಕ್ಕೆ ನಿಯೋಜಿಸಿದ ಎಲ್ಲಾ ಸಿಬ್ಬಂದಿಗಳಿಗೂ, ಕೈಗವಸು, ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಾಗುತ್ತದೆ. ಪದವೀಧರ ಮತಕ್ಷೇತ್ರವಿರುವುದರಿಂದ ಚುನಾವಣಾ ಕರ್ತವ್ಯಕ್ಕೆ ಮತದಾರರ ಪಟ್ಟಿಯಲ್ಲಿ ಇಲ್ಲದ ಸಿಬ್ಬಂದಿಯನ್ನೇ ನೇಮಕ ಮಾಡಲಾಗಿದೆ. ತುರ್ತು ಸಂದರ್ಭಗಳಿಗೆ ಮುನ್ನೆಚ್ಚರಿಕೆಯಾಗಿ ಪ್ರತಿ ಮತಗಟ್ಟೆಗೆ ಇಬ್ಬರು ಹೆಚ್ಚುವರಿ ಸಿಬ್ಬಂದಿಯನ್ನು ಖಾಯ್ದಿರಿಸಲಾಗಿದ್ದು, ಅಗತ್ಯವಿದ್ದಲ್ಲಿ ಬಳಸಿಕೊಳ್ಳಲಾಗುವುದು. ಸಿಬ್ಬಂದಿಗಳಲ್ಲಿ ಯಾರಿಗಾದರೂ ಚಳಿ, ಜ್ವರ, ನೆಗಡಿ, ಕೆಮ್ಮು ಮುಂತಾದ ಅನಾರೋಗ್ಯ ಕಂಡುಬAದಲ್ಲಿ ತಕ್ಷಣವೇ ಮಾಹಿತಿಯನ್ನು ಸಂಬAಧಿಸಿದ ತಾಲ್ಲೂಕಿನ ತಹಶೀಲ್ದಾರರಿಗೆ ನೀಡಬೇಕು. ಮತಪೆಟ್ಟಿಗೆ, ಮತಪತ್ರ, ಅಳಿಸಲಾಗದ ಶಾಯಿ ಮತ್ತು ಮತದಾರರ ಪಟ್ಟಿ ಅತಿಮುಖ್ಯವಾಗಿದ್ದು, ಮತಗಟ್ಟೆಗೆ ಹೋಗುವಾಗ ಎಲ್ಲಾ ಸಾಮಗ್ರಿಗಳನ್ನು ಪರಿಶೀಲಿಸಿ. ಚುನಾವಣಾ ಕರ್ತವ್ಯ ಬಹಳ ಜವಾಬ್ದಾರಿಯುತ ಕರ್ತವ್ಯವಾಗಿದ್ದು, ಯಾವುದೇ ನಿರ್ಲಕ್ಷö್ಯ ತೋರದೆ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ. ಗೊಂದಲಗಳಿದ್ದಲ್ಲಿ ಕೂಡಲೇ ಸಂಬAಧಿಸಿದ ಅಧಿಕಾರಿಯನ್ನು ಸಂಪರ್ಕಿಸಿ ಮಾಹಿತಿ ಪಡೆಯಿರಿ ಎಂದು ಹೇಳಿದರು.
ತರಬೇತುದಾರರು ಹಾಗೂ ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕೃಷ್ಣಮೂರ್ತಿ ದೇಸಾಯಿ ಮಾತನಾಡಿ, ಅಕ್ಟೋಬರ್ 28 ರಂದು ಚುನಾವಣೆ ನಡೆಯಲಿದ್ದು, ಸರಳ ಮತ್ತು ವ್ಯವಸ್ಥಿತ ಮತದಾನ ಪ್ರಕ್ರಿಯೆಗೆ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ತರಬೇತಿಗಳಿಗೆ ಚುನಾವಣಾ ನಿಯೋಜಿತ ಸಿಬ್ಬಂದಿ ಕಡ್ಡಾಯವಾಗಿ ಹಾಜರಾಗಬೇಕು. ಮತಗಟ್ಟೆಗಳಲ್ಲಿ ಪಿಆರ್‌ಓ ಹೊರತುಪಡಿಸಿ ಇನ್ನಾವುದೇ ಸಿಬ್ಬಂದಿ ಮೊಬೈಲ್ ಬಳಕೆ ಮಾಡುವಂತಿಲ್ಲ. ತರಬೇತಿಯಲ್ಲಿ ನೀಡಲಾಗುವ ಎಲ್ಲಾ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಮತಗಟ್ಟೆಗಳಲ್ಲಿ ಮತದಾರರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಮತದಾನ ಪ್ರಕ್ರಿಯೆಯಲ್ಲಿ ಯಾವುದೇ ಗೊಂದಲಗಳಿಗೆ ಆಸ್ಪದ ನೀಡಬಾರದು. ಏಜೆಂಟರು, ಮತದಾರರ ನಡುವೆ ಯಾವುದೇ ಸಂಪರ್ಕವಾಗದAತೆ, ಯಾವುದೇ ಪ್ರಭಾವ ಬೀರದಂತೆ ಎಚ್ಚರವಹಿಸಿ ಎಂದು ಚುನಾವಣಾ ಕರ್ತವ್ಯಕ್ಕೆ ಸಂಬAಧಿಸಿದ ಮಾಹಿತಿಯನ್ನು ನೀಡಿದರು.
ನಿವೃತ್ತ ವಿಷಯ ಪರಿವೀಕ್ಷಕರಾದ ಎಸ್.ಎಂ.ಸAಗಟಿ ಅವರು ಮತಪೆಟ್ಟಿಗೆ ಬಳಕೆ ಮತ್ತು ನಿರ್ವಹಣೆ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತರಾದ ನಾರಾಯಣರಡ್ಡಿ ಕನಕರಡ್ಡಿ, ಚುನಾವಣಾ ಪ್ರಿಸೈಡಿಂಗ್ ಅಧಿಕಾರಿಗಳು, ಪೋಲಿಂಗ್ ಅಧಿಕಾರಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು

Please follow and like us:
error