ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

ನವದೆಹಲಿ,  : ರಾಜ್ಯ ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಜೆಪಿ ಶನಿವಾರ ಪ್ರಕಟಿಸಿದೆ. ಚಿದಾನಂದ ಎಂ. ಗೌಡ, ಎಸ್.ವಿ. ಸಂಕನೂರ, ಶಶಿಲ್ ನಮೋಶಿ ಹಾಗೂ ಪುಟ್ಟಣ್ಣ ಅವರಿಗೆ ಟಿಕೆಟ್ ನೀಡಲಾಗಿದೆ. ಆಗ್ನೇಯ ಪದವೀಧರ ಕ್ಷೇತ್ರ, ಈಶಾನ್ಯ ಶಿಕ್ಷಕರ ಕ್ಷೇತ್ರ, ಬೆಂಗಳೂರು ಶಿಕ್ಷಕರ ಕ್ಷೇತ್ರ ಹಾಗೂ ಪಶ್ಚಿಮ ಪದವೀಧರ ಕ್ಷೇತ್ರಗಳಿಗೆ ಅಕ್ಟೋಬರ್ 28ರಂದು ಮತದಾನ ನಡೆಯಲಿದ್ದು, ನವೆಂಬರ್ 2ರಂದು ಮತ ಎಣಿಕೆ ನಿಗದಿಯಾಗಿದೆ.

 

 

Please follow and like us:
error