ಪ್ರಜಾಪ್ರಭುತ್ವ ಉಳಿವಿಗಾಗಿ ಮತದಾನ ಮಾಡಿ: ಶ್ರೀಮತಿ ಸಾಲಿಮಠ

ವಿಜಯಪುರ ಏ. ೮- ಮತದಾನ ಎಂಬುದು ಸಂವಿಧಾನವು ನಮಗೆ ನೀಡಿದ ಒಂದು ಪವಿತ್ರವಾದ ಹಕ್ಕು. ಪ್ರಜಾಪ್ರಭುತ್ವದ ಉಳಿವಿಗಾಗಿ ಪ್ರತಿಯೊಬ್ಬರೂ ತಪ್ಪದೇ ಮತದಾನ ಮಾಡಬೇಕು ಎಂದು ಖ್ಯಾತ ಹಾಸ್ಯ ಸಾಹಿತಿ ಶ್ರೀಮತಿ ಇಂದುಮತಿ ಸಾಲಿಮಠ ಕರೆ ನೀಡಿದರು.
ಇಲ್ಲಿಗೆ ಸಮೀಪದ ಶಿವಣಗಿ ಗ್ರಾಮದಲ್ಲಿ ಸ್ವೀಪ್ ಸಮಿತಿ ಮತ್ತು ಗ್ರಾಮ ಪಂಚಾಯತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮತದಾನ ಜಾಗೃತಿ ನಿಮಿತ್ಯ ಏರ್ಪಡಿಸಲಾಗಿದ್ದ ‘ಹಾಸ್ಯ ಸಂಜೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಹಾಸ್ಯಚಟಾಕಿಗಳ ಮೂಲಕ ಮತದಾನದ ಮಹತ್ವವನ್ನು ತಿಳಿಸಿಕೊಟ್ಟರು.
ಜಿಲ್ಲಾ ಪಂಚಾಯತ ಯೋಜನಾಧಿಕಾರಿಗಳಾದ ಪಿ.ಜೆ. ಉಪ್ಪಲದಿನ್ನಿ, ಶಿವಣಗಿ ಗ್ರಾಮಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಮಹಾಂತಮ್ಮ ಬಿರಾದಾರ, ಹೊಸೂರ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಶ್ರೀಮತಿ ರೇಖಾ ಪವಾರ ಸೇರಿದಂತೆ ಗ್ರಾಮಪಂಚಾಯತಿಯ ಎಲ್ಲ ಸಿಬ್ಬಂದಿ, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

Please follow and like us:
error