ಪ್ರತಿ ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿ -ಸಿ.ವಿ ಚಂದ್ರಶೇಖರ

ಕೊಪ್ಪಳ ತಾಲೂಕಿನ ಬಿಸರಳ್ಳಿ ಗ್ರಾಮದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನುದ್ದೇಶಿಸಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಿ.ವಿ ಚಂದ್ರಶೇಖರ ಮಾತನಾಡಿ ಪ್ರತಿ ಬೂತ್ ಮಟ್ಟದಲ್ಲೂ ಪಕ್ಷ ಸಂಘಟನೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿ ಆಗಿದ್ದು ಪ್ರತಿ ಮನೆ ಮನೆಗೂ ಕೇಂದ್ರ ಸರ್ಕಾರದ ಯೋಜನೆಗಳನ್ನು ಮತ್ತು ಕೊಪ್ಪಳ ಲೋಕಸಭಾ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳನ್ನು ತಲುಪಿಸಿ ಮತ್ತೊಮ್ಮೆ ನರೇಂದ್ರ ಮೋದಿ ಅವರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಬೇಕು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ನಾಯಕರಾದ ಅಪ್ಪಣ್ಣ ಪದಕಿ, ಈಶಪ್ಪ ಮಾದಿನೂರು, ಮಹಾಂತೇಶ ಮೈನಳ್ಳಿ, ಡಿ.ಮಲ್ಲಣ್ಣ ಹಾಗೂ ವಸಂತ ಪೂಜಾರ, ಗವಿ ಜಂತಕಲ್ ಸೇರಿದಂತೆ ಗ್ರಾಮದ ಹಿರಿಯರು ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು
Please follow and like us:
error