ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ?- ಸಿದ್ದರಾಮಯ್ಯ

ಕನ್ನಡನೆಟ್ ಬೆಂಗಳೂರು : ನಮ್ಮ ಪಕ್ಷದ ಅಭ್ಯರ್ಥಿ ಜಯಚಂದ್ರ ಅವರನ್ನು ಬಿಜೆಪಿ ನಾಯಕರು ಮುದಿ ಎತ್ತು ಎಂದು ಹೀಗಳೆದಿದ್ದಾರೆ, ಹಾಗಾದರೆ ಬಿ.ಎಸ್ ಯಡಿಯೂರಪ್ಪ ಮತ್ತು ನರೇಂದ್ರ ಮೋದಿ ಅವರೇನು ಎಳೆ ಕಡಸುಗಳಾ? ಚುನಾವಣೆಯನ್ನು ಸಾಧನೆ ಮತ್ತು ಸಿದ್ಧಾಂತದ ಮೂಲಕ ಎದುರಿಸಲಾಗದವರು ಮಾತ್ರ ಸೋಲಿನ ಭೀತಿಯಿಂದ ಈ ರೀತಿ ಚಾರಿತ್ರ್ಯಹರಣ, ಗೂಂಡಾಗಿರಿ, ಹಣ ಹಂಚುವುದು ಮೊದಲಾದ ಅಡ್ಡದಾರಿ ಹಿಡಿಯುವುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಾನು ಯಶವಂತಪುರ ಸಮೀಪ ಚುನಾವಣಾ ಪ್ರಚಾರ ಭಾಷಣ ಮಾಡುವ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಭಾಷಣಕ್ಕೆ ಅಡ್ಡಿಪಡಿಸಿದ್ದರಲ್ಲದೆ, ನಾನು ವಾಪಾಸು ತೆರಳುವಾಗ ವಾಹನ ಅಡ್ಡಗಟ್ಟಿ ಬೆದರಿಸುವ ಪ್ರಯತ್ನ ಮಾಡಿದ್ದರು. ಇದು ಬಿಜೆಪಿಯವರ ರಾಜಕಾರಣದ ಇನ್ನೊಂದು ಮುಖವನ್ನು ಅನಾವರಣಗೊಳಿಸಿದೆ.ಆರ್.ಆರ್ ನಗರದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಎಂದು ಹೇಳಿದ್ದ ಮುನಿರತ್ನ ಅವರೆ ಅಲ್ಲಿನ ಕಾನೂನು ಬಾಹಿರ ಚಟುವಟಿಕೆಗಳಿಗೆ, ಗೂಂಡಾಗಿರಿಗೆ ಮೂಲ ಕಾರಣ. ಸೋಲಿನ ಭಯದಿಂದ ಜಿ.ಕೆ ವೆಂಕಟೇಶ್ ಅಂಥವರನ್ನು ಮುಂದೆ ಬಿಟ್ಟು ಮುನಿರತ್ನ ಅವರೆ ಗಲಭೆ ಎಬ್ಬಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂಬ ಅನುಮಾನವಿದೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮುಂದಿನ ಮುಖ್ಯಮಂತ್ರಿ ಯಾರಾಗಬೇಕು ಎಂದು ಹೈಕಮಾಂಡ್ ಹಾಗೂ ಶಾಸಕರು ನಿರ್ಧರಿಸುತ್ತಾರೆ. ಕೆಲವರು ಅಭಿಮಾನದಿಂದ ಇವ್ರೆ ನಮ್ಮ ಮುಂದಿನ ಮುಖ್ಯಮಂತ್ರಿ ಅಂತ ಹೇಳ್ತಾರೆ, ಅವರಿಗೆಲ್ಲ ಮಾತಾಡ್ಬೇಡಿ ಅಂತ ಹೇಳೋಕಾಗುತ್ತಾ? ಎಂದು ಪ್ರಶ್ನೆ  ಮಾಡಿದ್ದಾರೆ

 

Please follow and like us:
error