ಕೊಪ್ಪಳ, : ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯು ಅಕ್ಟೋಬರ್. 28 ರಂದು ನಡೆಯಲಿದ್ದು, ಮತದಾರರು ಮತ ಚಲಾಯಿಸಲು ಮತಗಟ್ಟೆಗೆ ಆಗಮಿಸಿದ ಸಂದರ್ಭದಲ್ಲಿ ಮತದಾರರ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ತೋರಿಸಿ ಮತ ಚಲಾಯಿಸಬೇಕು. ಒಂದು ವೇಳೆ ವೋಟರ್ ಐಡಿ ಇಲ್ಲದಿದ್ದರ ಪರ್ಯಾಯ ಗುರುತಿನ ದಾಖಲೆ ತೋರಿಸಿ ಮತದನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಭಾವಚಿತ್ರವಿರುವ ಮತದಾರರ ಗುರುತಿನ ಚೀಟಿಯನ್ನು ಹೊಂದಿರದ ಪಕ್ಷದಲ್ಲಿ ಮತದಾರರರು ಭಾರತ ಚುನಾವಣಾ ಆಯೋಗವು ನಿಗದಿಪಡಿಸಿದ ಪರ್ಯಾಯ ಗುರುತಿನ ದಾಖಲೆಗಳಾದ ಆಧಾರ್ ಕಾರ್ಡ, ವಾಹನ ಚಾಲನಾ ಪರವಾನಗಿ, ಪ್ಯಾನ್ ಕಾರ್ಡ, ಭಾರತೀಯ ಪಾಸ್ಪೋರ್ಟ್, ರಾಜ್ಯ ಅಥವಾ ಕೇಂದ್ರ ಸರ್ಕಾರಗಳು, ಸ್ಥಳೀಯ ಸಂಸ್ಥೆಗಳು ಅಥವಾ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿ, ಸಂಸದರಿಗೆ/ ವಿಧಾನಸಭಾ ಸದಸ್ಯರಿಗೆ/ ವಿಧಾನಪರಿಷತ್ ಸದಸ್ಯರಿಗೆ ನೀಡಲಾಗಿರುವ ಅಧಿಕೃತ ಗುರುತಿನ ಚೀಟಿಗಳು, ಸಂಬAಧಪಟ್ಟ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಣ ಸಂಸ್ಥೆಗಳು ನೀಡಿರುವ ಸೇವಾ ಗುರುತಿನ ಚೀಟಿ, ವಿಶ್ವವಿದ್ಯಾಲಯಗಳು ನೀಡಿರುವ ಮೂಲ ಪದವಿ ಪ್ರಮಾಣ ಪತ್ರ, ಸಕ್ಷಮ ಪ್ರಾಧಿಕಾರಿಗಳು ನೀಡಿರುವ ವಿಕಲಚೇತನ ಪ್ರಮಾಣ ಪತ್ರದ ಮೂಲ ಪ್ರತಿಗಳನ್ನು ತೋರಿಸಿ ಮತದಾನ ಮಾಡಬಹುದು ಎಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿ ವಿಕಾಸ್ ಕಿಶೋರ್ ಸುರಳ್ಕರ್ ತಿಳಿಸಿದ್ದಾರೆ.
ಮತದಾರರ ಚೀಟಿ ಇಲ್ಲದಿದ್ದರೆ ಪರ್ಯಾಯ ಗುರುತಿನ ದಾಖಲೆ ತೋರಿಸಿ ಮತದಾನಕ್ಕೆ ಅವಕಾಶ : ಡಿಸಿ
ಕರ್ನಾಟಕ ವಿಧಾನ ಪರಿಷತ್ತಿಗೆ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆ-2020
Please follow and like us: