ಲೋಕಸಭಾ ಚುನಾವಣೆ : ಮತದಾನ ಹಾಗೂ ಪೂರ್ವ ದಿನದಂದು ಸಾರ್ವತ್ರಿಕ ರಜೆ ಘೋಷಣೆ

ಕೊಪ್ಪಳ ಏ. 18 :ಕೊಪ್ಪಳ ಲೋಕಸಭಾ ಸಾರ್ವತ್ರಿಕ ಚುನಾವಣೆಯ ನಿಮಿತ್ಯ ಮತದಾನ ದಿನ ಹಾಗೂ ಮತದಾನ ಪೂರ್ವ ದಿನದಂದು ಸಾರ್ವತ್ರಿಕ ರಜೆಯನ್ನು ಘೋಷಿಸಿ, ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಪಿ.ಸುನೀಲ್ ಕುಮಾರ್‌ರವರು ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಲೋಕಸಭಾ ಕ್ಷೆÃತ್ರಕ್ಕೆ ಏಪ್ರಿಲ್. 23ರಂದು ನಡೆಯಲಿರುವ ಚುನಾವಣೆ ನಿಮಿತ್ತ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಎಲ್ಲಾ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಎಲ್ಲಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಸರ್ಕಾರವು ಸರ್ಕಾರವು ವೇತನ ಸಹಿತ ರಜೆಯನ್ನು ಘೋಷಿಸಿದೆ.
ಏಪ್ರಿಲ್. 23ರಂದು ಮತದಾರರು ಮತ ಚಲಾಯಿಸಲು ಅನುಕೂಲವಾಗಲು 8-ಕೊಪ್ಪಳ ಲೋಕಸಭಾ ಕ್ಷೆÃತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸರ್ಕಾರಿ ಕಛೇರಿಗಳಿಗೆ, ಶಾಲಾ ಕಾಲೇಜುಗಳಿಗೆ (ಅನುದಾನಿತ ಶಿಕ್ಷಣ ಸಂಸ್ಥೆಗಳು ಒಳಗೊಂಡಂತೆ) ಹಾಗೂ ಎಲ್ಲಾ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ, ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔದ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಸಂಸ್ಥೆಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951ರ ಕಲಂ ಬಿ ಅಡಿಯಲ್ಲಿ ಎಲ್ಲಾ ಉಪಬಂಧಗಳಿಗೆ ಒಳಪಟ್ಟು ಏಪ್ರಿಲ್. 23ರಂದು ವೇತನ ಸಹಿತ ರಜೆ ಘೋಷನೆ ಮಾಡಿ ಆದೇಶಿಸಲಾಗಿದೆ.
8-ಕೊಪ್ಪಳ ಲೋಕಸಭಾ ಕ್ಷೆÃತ್ರದ ವ್ಯಾಪ್ತಿಯಲ್ಲಿ ಮತಗಟ್ಟೆ ಸ್ಥಾಪಿಸಿರುವ ಎಲ್ಲಾ ಸರ್ಕಾರಿ/ ಅರೇ ಸರ್ಕಾರಿ, ಖಾಸಗಿ ಶಾಲಾ ಕಾಲೇಜು/ ಕಛೇರಿಗಳಿಗೆ ಮತದಾನ ಪೂರ್ವ ಸಿದ್ದರೆ ಮಾಡಿಕೊಳ್ಳಲು ಮತದಾನದ ಪೂರ್ವ ದಿನ ಅಂದರೆ ಏಪ್ರಿಲ್. 22 ರಂದು ಅಪರಾಹ್ನ ರಜೆಯನ್ನು ರಜೆ ಘೋಷಣೆ ಮಾಡಲಾಗಿದೆ. ಚುನಾವಣಾ ಕಾರ್ಯಗಳಿಗೆ ನಿಯೋಜಿಸಲ್ಪಟ್ಟ ಎಲ್ಲಾ ನೌಕರರು ಕರ್ತವ್ಯಕ್ಕೆ ಹಾಜರಾಗಬೇಕು ಮತ್ತು ಈ ರಜೆಯು ತುರ್ತು ಸೇವೆಗಳಿಗೆ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಆದೇಶದಲ್ಲಿ ತಿಳಿಸಿದ್ದಾರೆ.

Please follow and like us:
error