ಶಿರಾ, ಆರ್.ಆರ್.ನಗರ ಉಪ ಚುನಾವಣೆ: ಬಿಜೆಪಿಗೆ ಮುನ್ನಡೆ

ಬೆಂಗಳೂರು, ನ.10: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮತ್ತು ಜಿದ್ದಾಜಿದ್ದಿ ಸೃಷ್ಟಿಸಿರುವ ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳ ಉಪಚುನಾವಣೆಯ ಮತ ಎಣಿಕೆ ಬಿರುಸಿನಿಂದ ನಡೆಯುತ್ತಿದ್ದು, ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

3ನೇ ಸುತ್ತಿನ ಮತ ಎಣಿಕೆಯ ಮುಕ್ತಾಯಕ್ಕೆ ಶಿರಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಡಾ.ರಾಜೇಶ್ ಗೌಡ ಮತ್ತು 4ನೇ ಸುತ್ತಿನ ಮುಕ್ತಾಯಕ್ಕೆ ಆರ್ .ಆರ್.ನಗರ ಕ್ಷೇತ್ರದಲ್ಲಿ ಬಿಜೆಪಿಯ ಮುನಿರತ್ನ ಮುನ್ನಡೆ ಸಾಧಿಸಿದ್ದಾರೆ.

ಎರಡೂ ಕ್ಷೇತ್ರಗಳಲ್ಲಿ ಪ್ರತಿಕಪಕ್ಷ ಕಾಂಗ್ರೆಸ್ ಎರಡನೇ ಸ್ಥಾನಕ್ಕೆ, ಜೆಡಿಎಸ್ ಮೂರನೆ ಸ್ಥಾನಕ್ಕೆ ತಳಲ್ಪಟ್ಟಿದ್ದು ತೀವ್ರ ಮುಖಭಂಗ ಅನುಭವಿಸಿವೆ.

ಐದನೇ ಸುತ್ತಿನ ಮತ ಎಣಿಕೆ ಮುಕ್ತಾಯ..

1488 ಮತಗಳಿಂದ ಬಿಜೆಪಿ ಮುನ್ನಡೆ..

ಜೆಡಿಎಸ್ ಅಮ್ಮಾಜಮ್ಮಾ- 8879
ಕಾಂಗ್ರೆಸ್ ಟಿ.ಬಿ.ಜಯಚಂದ್ರ- 12,718
ಬಿಜೆಪಿ ರಾಜೇಶ್ ಗೌಡ 14,206

Please follow and like us:
error