2ನೇ ಹಂತದ ಗ್ರಾ.ಪಂ. ಚುನಾವಣೆ : 4,372 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧ

ಕೊಪ್ಪಳ ಜಿಲ್ಲೆಯಲ್ಲಿ ನಡೆಯುತ್ತಿರುವ ಗ್ರಾಮ ಪಂಚಾಯಿತಿ ಸಾರ್ವತ್ರಿಕ ಚುನಾವಣೆಯ ಎರಡನೇ ಹಂತದ ಚುನಾವಣೆ ನಡೆಯಲಿರುವ ಗಂಗಾವತಿ, ಕಾರಟಗಿ, ಕನಕಗಿರಿ ಹಾಗೂ ಕುಷ್ಟಗಿ ತಾಲ್ಲೂಕುಗಳಲ್ಲಿನ 76 ಗ್ರಾಮ ಪಂಚಾಯಿತಿಗಳಲ್ಲಿನ 1,375 ಸ್ಥಾನಗಳಿಗೆ 4809 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 20 ನಾಮಪತ್ರ ತಿರಸ್ಕೃತವಾಗಿದೆ. ಇದರಿಂದಾಗಿ ಒಟ್ಟು 4,372 ಅಭ್ಯರ್ಥಿಗಳು ಸಲ್ಲಿಸಿರುವ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ.ಮಾರುತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕುವಾರು ವಿವರ:
ಈ ಪೈಕಿ ಗಂಗಾವತಿ ತಾಲ್ಲೂಕಿನ 18 ಗ್ರಾಮ ಪಂಚಾಯಿತಿಗಳಲ್ಲಿನÀ 347 ಸ್ಥಾನಗಳಿಗೆ 1,243 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 2 ನಾಮಪತ್ರಗಳು ತಿರಸ್ಕೃತಗೊಂಡು ಒಟ್ಟು 1125 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಕಾರಟಗಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 207 ಸ್ಥಾನಗಳಿಗೆ 786 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, 4 ನಾಮಪತ್ರಗಳು ತಿರಸ್ಕೃತಗೊಂಡು ಒಟ್ಟು 748 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿದೆ.
ಕನಕಗಿರಿ ತಾಲ್ಲೂಕಿನ 11 ಗ್ರಾಮ ಪಂಚಾಯಿತಿಗಳಲ್ಲಿನ 196 ಸ್ಥಾನಗಳಿಗೆ 540 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 6 ನಾಮಪತ್ರಗಳು ತಿರಸ್ಕೃತಗೊಂಡಿದ್ದರಿAದ ಒಟ್ಟು 514 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ. ಕುಷ್ಟಗಿ ತಾಲ್ಲೂಕಿನ 36 ಗ್ರಾಮ ಪಂಚಾಯಿತಿಗಳಲ್ಲಿನ 625 ಸ್ಥಾನಗಳಿಗೆ 2240 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದು, ಇದರಲ್ಲಿ 8 ನಾಮಪತ್ರಗಳು ತಿರಸ್ಕೃತಗೊಂಡು ಒಟ್ಟು 1985 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ಧವಾಗಿವೆ ಎಂದು ಅಪರ ಜಿಲ್ಲಾಧಿಕಾರಿ ಎಂ.ಪಿ ಮಾರುತಿ ತಿಳಿಸಿದ್ದಾರೆ.

Please follow and like us:
error